Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ





*ಬೆಂಗಳೂರು ನಗರ ಜಿಲ್ಲೆ, ಜುಲೈ 22,:* ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಕಾನೂನು ಪದವೀಧರರಿಗೆ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯು ಕುಟುಂಬದ ವಾರ್ಷಿಕ ಆದಾಯ (ತಂದೆ/ತಾಯಿ ಸೇರಿ) ರೂ.2.50 ಲಕ್ಷ ಮೀರಿರಬಾರದು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000/- ಗಳ ಶಿಷ್ಯವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ / ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.



ಆಸಕ್ತ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ವೆಬ್ ಸೈಟ್ www.twd.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.



ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.



ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ