Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ


ಶಿವಮೊಗ್ಗ,ಜೂ.3ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025 ರ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು.

2024 ನೆಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2024ನೆಯ ವರ್ಷದ ಪುಸ್ತಕ ಬಹುಮಾನ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2024ರ ಜನವರಿ 01 ರಿಂದ 2024ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2024 ಎಂದು ಮುದ್ರಿತವಾಗಿರಬೇಕು.

ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ)(ಅಕಾಡೆಮಿ ಮಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿoಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭoಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ) / ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಗಳಿಗೆ ಸಂಬoಧಿಸಿದ ಸಂಶೋಧನೆ), ವೈಚಾರಿಕ / ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು( ಎಲ್ ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು), ಲೇಖಕರ ಮೊದಲ ಸ್ವತಂತ್ರಕೃತಿ (2024ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) (ಕಾವ್ಯ ಪ್ರಕಾರವನ್ನು ಹೊರತುಪಡಿಸಿ), ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾನ ಸಾಹಿತ್ಯ (ದಾಸ ಸಾಹಿತ್ಯಕುರಿತ ಸೃಜನ/ ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ. ಶಾಂತರಸ ಗಜಲ್ ಕಾವ್ಯ ದತ್ತಿ ಬಹುಮಾನಕ್ಕಾಗಿ).

ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: ಮರುಮುದ್ರಣವಾದ ಪುಸ್ತಕಗಳು. ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು. ಪಠ್ಯಪುಸ್ತಕಗಳು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು. ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು. ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು.

ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದೆAದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ