Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಪಟ್ಟಣದ ವಿವಿಧ ರಸ್ತೆ, ವೃತ್ತಗಳ ಮರುನಾಮಕರಣ: ಆಕ್ಷೇಪಣೆಗಳಿಗೆ ಆಹ್ವಾನ



ಬಳ್ಳಾರಿ,ಆ.05

ಕಂಪ್ಲಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ಬಡಾವಣೆ(ನಗರ)ಗಳ ಮುಖ್ಯ ರಸ್ತೆಗಳಲ್ಲಿನ ವೃತ್ತಗಳನ್ನು ಹೊಸದಾಗಿ ನಾಮಕರಣ ಮಾಡಲು ಪಟ್ಟಣದ ವಿವಿಧ ಸಮಾಜದವರು ಮನವಿ ಸಲ್ಲಿಸಿದ್ದು, ನಾಮಕರಣ ಕುರಿತು ಯಾರಿಂದಲಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ಮತ್ತು ಸಮಂಜಸ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 30 ದಿನದೊಳಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು.

ಕಂಪ್ಲಿ ಪಟ್ಟಣದ ನಟರಾಜ ಕಲಾ ಮಂದಿರದ ಮುಂಭಾಗದಲ್ಲಿರುವ ಇರುವ ವೃತ್ತವನ್ನು ‘ದೇವರ ದಾಸಿಮಯ್ಯ ವೃತ್ತ’ ಎಂದು ನಾಮಕರಣ, ವಾರ್ಡ್ ನಂ.17 ರ ನಟರಾಜ ಕಲಾ ಮಂದಿರದ ಮುಂಭಾಗದಲ್ಲಿ ಇರುವ ಕಮಾನಿಗೆ ‘ಶ್ರೀ ಚೌಡೇಶ್ವರ ಮಹಾದ್ವಾರ’ ಎಂದು ನಾಮಕರಣ, ಪಟ್ಟಣದ ವಿನಾಯಕ ನಗರದ 05 ನೇ ಅಡ್ಡರಸ್ತೆಯ ಚತುರ್ಮುಖ ರಸ್ತೆಗೆ ‘ಶ್ರೀ ಮಹಾಯೋಗಿ ವೇಮನ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ’ ವೃತ್ತ ಎಂದು ನಾಮಕರಣ, ಪಟ್ಟಣದ 05 ನೇ ವಾರ್ಡ್ನ್ನು ‘ಬೀರಲಿಂಗೇಶ್ವರ ನಗರ’ ಎಂದು ಸರ್ಕಾರದ ಸುತ್ತೋಲೆಗಳು ಮತ್ತು ಮಾರ್ಗಸೂಚಿ ಪ್ರಕಾರ ನಾಮಕರಣ ಮಾಡಲು ಉದ್ದೇಶಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಅವಧಿ ಮೀರಿ ಬಂದ ಮನವಿ ಅಥವಾ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು