Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

*ಫಲಾನುಭವಿ ಆಧಾರಿತ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ*


ಬಳ್ಳಾರಿ,ಜು.03



ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25 ನೇ ಸಾಲಿಗೆ 13 ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಡಿ ಜಿಲ್ಲೆಯ ವಿಕಲಚೇತನರಿಂದ (ಅಂಗವಿಕಲರು) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.

*ಯೋಜನೆಗಳು:*

ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆ ಯೋಜನೆ, ಶ್ರವಣ ದೋಷ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ.

ಮೇಲ್ಕಂಡ ಯೋಜನೆಗಳಿಗೆ ಸೇವಾಸಿಂಧು, ಗ್ರಾಮ ಒನ್, ಬಳ್ಳಾರಿ ಒನ್ ಮತ್ತು ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ (https://sevasindhu.karnataka.gov.in/Sevasindhu/Department Services Kannada) ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಯಸುವ ಫಲಾನುಭವಿಗಳಿಗೆ ಸೇವಾಸಿಂಧು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ

ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ