Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮಹಿಳೆಯರು - ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗುತ್ತಿರುವುದು ದುರದೃಷ್ಟಕರ : ನ್ಯಾ. ಸಂತೋಷ್ಎಂ.ಎಸ್.





ಶಿವಮೊಗ್ಗ : ಪೆಬ್ರವರಿ 11 :  : ದೇಶ ಸ್ವಾತಂತ್ರ್ಯಾ ನಂತರ ಹಲವು ದಶಕಗಳ ನಂತರವೂ ಒತ್ತಾಯ ಪೂರ್ವಕ ದುಡಿಮೆ, ಲೈಂಗಿಕ ದೌರ್ಜನ್ಯ, ಭಿಕ್ಷಾಟನೆ ಮತ್ತು ಕಾನೂನು ಬಾಹಿರ ಅಂಗಾಂಗಗಳ ಜೋಡಣೆ ರೂಪದಲ್ಲಿ ಇಂದು ಹಲವಾರು ಮಹಿಳೆಯರು ಮತ್ತು ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ಎಂ.ಎಸ್.ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ಇಲಾಖೆ ಮತ್ತು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಕಾಯ್ದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಾನವ ಸಾಗಾಣಿಕೆಯು ಒಂದು ಘೋರ ಅಪರಾಧವಾಗಿದೆ. ಪ್ರಪಂಚದಲ್ಲೆಡೆ ಅದರ ಪ್ರಭಾವವಿದ್ದು, ಅಸಮಾನತೆ. ತಾರತಮ್ಯತೆ ಮತ್ತು ದುರ್ಬಲತೆಗೆ ಕಾರಣವಾಗಿದೆ. ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದರು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು.

ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ 200ಕ್ಕೂ ಹೆಚ್ಚಿನ ಫೋಕ್ಸೋ ಮತ್ತು 50ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ ಎಂದ ಅವರು, ಈ ಎಲ್ಲಾ ಅನಿಷ್ಟಗಳ ನಿಯಂತ್ರಣಕ್ಕಾಗಿ 15 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪ್ರಕರಣವನ್ನು ದಾಖಲಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧವೂ ಕಾನೂನಿನಲ್ಲಿ ಕ್ರಮಕ್ಕೆ ಅವಕಾಶ ಒದಗಿಸಲಾಗಿದೆ ಎಂದರು.

ರಾಜ್ಯದೊಳಗೆ ವಲಸಿಗರ ವಸತಿ ಸಂಖ್ಯೆಯೂ ಹೆಚ್ಚಾಗುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಲಾಗಿದೆ. ವಲಸಿಗರು ತೋಟದ ಮನೆಗಳಲ್ಲಿ ವಾಸವಾಗಿದ್ದು, ಕಾರ್ಯನಿರ್ವಹಿಸುತ್ತಿದ್ದಾರೆ. ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕಳ್ಳಸಾಗಾಣಿಕೆ ಆಗಬಹುದಾದ ಸಾಧ್ಯತೆಗಳಿದ್ದರೆ, ಅದನ್ನು ಪರಿಶೀಲಿಸಿ, ಅವರನ್ನು ರಕ್ಷಿಸುವಲ್ಲಿ ಅಗತ್ಯ ಕ್ರಮ ವಹಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಡಿ.ವೈ.ಎಸ್ಪಿ. ಬಾಬು ಅಂಜನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ಶ್ರೀಮತಿ ರೇಖಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ಖಾನ್, ಮಂಜುನಾಥಪಾಟೀಲ್ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಭಾರತಿ ಆರ್.ಬಣಕಾರ್ಅವರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ