Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಮಾಜ ಸುಧಾರಣೆಯಲ್ಲಿ ಜಗದ್ಗುರು ರೇಣುಕಾಚಾರ್ಯರ ಪಾತ್ರ ಅಪಾರ: ಬಿ.ಸಿ. ಶಿವಾನಂದಮೂರ್ತಿ


ಜಗದ್ಗುರು ಬಸವಣ್ಣನವರಿಗಿಂತ ಮೊದಲೇ ಸಮಾಜ ಸುಧಾರಣೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ರವರು ಮಹತ್ವದ ಪಾತ್ರವನ್ನು ನಿರ್ವಹಿಸಿದ್ದರು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು



ಇಂದು ಮಾ.12 ಕರ್ನಾಟಕದ ಸಂಘ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ರವರ ಸಿದ್ಧಾಂತ ಶಿಖಾಮಣಿ ಎಂಬ ಗ್ರಂಥದಲ್ಲಿ ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂದು ಪ್ರತಿಪಾದಿಸಲಾಗಿದೆ ಎಂದರು.



ನಾವೆಲ್ಲರೂ ಕೇವಲ ಒಂದು ಜಾತಿ ಮತಕ್ಕೆ ಸೀಮಿತವಾಗದೆ ಜಗದ್ಗುರು ರೇಣುಕಾಚಾರ್ಯರ ಮಾನವೀಯತೆ ಸಿದ್ಧಾಂತಗಳನ್ನು ಪಾಲಿಸೋಣ, ಅವರ ಮಾರ್ಗದರ್ಶನದಂತೆ ಎಲ್ಲರೂ ಸಮಾನರು ಎಂದು ಮನೋಭಾವನೆಯ ಜೊತೆಗೆ ಬೆಳಕಿನೆಡೆಗೆ ಸಾಗೋಣ, ಮಂಡ್ಯ ಜಿಲ್ಲೆಯಲ್ಲೂ ಸಹ ಶ್ರೀ ರೇಣುಕಾಚಾರ್ಯರ ಪ್ರಭಾವಕ್ಕೊಳಗಾಗಿ ಅನೇಕ ಕ್ರಾಂತಿಗಳು ಜರುಗಿವೆ ಎಂದು ತಿಳಿಸಿದರು.



*ಮಠಗಳ ಜಾತ್ಯತೀತ ಕೊಡುಗೆ ಅನನ್ಯ-ಶ್ರೀ ತ್ರಿನೇತ್ರ ಶಿವಯೋಗಿ ಸ್ವಾಮೀಜಿ*



ಮಠಗಳು ಸಮಾಜಕ್ಕೆ ಜಾತ್ಯತೀತವಾಗಿ ದೊಡ್ಡ ಕೊಡುಗೆಯನ್ನೇ ನೀಡಿವೆ ಎಂದು ಶ್ರೀರಂಗಪಟ್ಟಣ ಚಂದ್ರವನ ಆಶ್ರಮ ಮತ್ತು ಶ್ರೀ ದುರ್ದಂಡೇಶ್ವರ ಮಹಂತ ಶಿವಯೋಗಿಗಳ ಮಠ ಬೇಬಿ ಗ್ರಾಮದ ಡಾ.ತ್ರಿನೇತ್ರ ಮಹಂತ ಶಿವಯೋಗಿಸ್ವಾಮೀಜಿ ಅಭಿಪ್ರಾಯಪಟ್ಟರು.

.

ಸಿದ್ದಗಂಗಾ ಮಠ, ಸುತ್ತೂರು ಮಠ ನಮ್ಮ ಬೇಬಿ ಮಠ ಸೇರಿದಂತೆ ರಾಜ್ಯದ ಮಠಗಳ ಶಾಲೆಗಳಲ್ಲಿ, ಹಾಸ್ಟೆಲ್‌ಗಳಲ್ಲಿ ಎಲ್ಲಾ ಜಾತಿ ಜನಾಂಗದ ವಿದ್ಯಾರ್ಥಿಗಳಿರುವುದು ಇದಕ್ಕೆ ಸಾಕ್ಷಿ ಎಂಬುದನ್ನು ಘಂಟಾಘೋಷವಾಗಿ ಹೇಳುತ್ತೇನೆ ಎಂದರು.



ಈ ಮಠಗಳು ಇಂದಲ್ಲ ಅಂದಿನಿಂದ ಸೇವೆ ಮಾಡಿಕೊಂಡು ಬಂದಿರುವ ಮಠಗಳಾಗಿವೆ. ಏಕೆಂದರೆ ಧರ್ಮ ಎಂದರೆ ಪ್ರೀತಿಸು ಎಂದರ್ಥ. ಸತ್ಯ, ನೀತಿ ಮತ್ತು ನ್ಯಾಯವನ್ನು ಧಾರಣೆ ಮಾಡಬೇಕು ಅಂತ ಅರ್ಥ. ಎಲ್ಲಾ ಧಾರ್ಮಿಕ ಮುಖಂಡರು ಸಮಾಜದ ಕಲ್ಯಾಣಕ್ಕಾಗಿ ಬಂದಿರುತ್ತಾರೆ ಎಂದರು.



ಶಿವನ ಸ್ವರೂಪವಾಗಿ ಗುರುಗಳು ಈ ಜಗತ್ತಿನಲ್ಲಿ ಇದ್ದಾರೆ. ಅದರಂತೆ ಜಗದ್ಗುರು ಶ್ರೀ ರೇಣುಕಾಚಾರ್ಯರು ಬಂದಿದ್ದಾರೆ. ಗುರುಗಳು ಜ್ಞಾನವನ್ನು ನೀಡಲು, ಅರಿವನ್ನು ನೀಡಲು, ಭಕ್ತರನ್ನು ಬೆಳಕಿನೆಡೆಗೆ ಕರೆದುಕೊಂಡು ಹೋಗಲು ಬರುತ್ತಾರೆ ವಿನಃ ಸಿರಿ ಸಂಪತ್ತು ಗಳಿಸುವುದಕ್ಕಲ್ಲ ಎಂದರು‌



ಮಧ್ವಾಚಾರ್ಯರು,ಶಂಕರಾಚಾರ್ಯರು, ಬಸವಣ್ಣನವರು,ಬುದ್ಧ,ಜಗದ್ಗುರು ರೇಣುಕಾಚಾರ್ಯರಾಗಬಹುದು ಎಲ್ಲರೂ ಬಂದ ಉದ್ದೇಶ ಒಂದೇ ಸಮಾಜದ ಕಲ್ಯಾಣಕ್ಕಾಗಿ ಪ್ರತಿಯೊಬ್ಬರಲ್ಲೂ ಸಂಸ್ಕಾರ ಕೊಟ್ಟು ಬೆಳೆಸಲು ಬಂದಿರುವವರು.ಬಸವಣ್ಣನವರ ಕಳಬೇಡ,ಕೊಲಬೇಡ, ಹುಸಿಯ ನುಡಿಯಲು ಬೇಡ.... ವಚನ ಸದಾ ಕಾಲಕ್ಕೂ ಪ್ರಸ್ತುತ ಎಂದರು.



ನಂತರ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಶ್ರೀ ಜಗದ್ಗುರು ರೇಣುಕಾಚಾರ್ಯ ವಿಜ್ಞಾನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಮಮತಾ ಸಾಲಿಮಠ ಶ್ರೀ ಜಗದ್ಗುರು ರೇಣುಕಾಚಾರ್ಯರು, ಸಮಾಜದ ಒಳಿತಿಗಾಗಿ ಅನೇಕ ಕಾರ್ಯಗಳನ್ನು ಮಾಡಿದ್ದಾರೆ, ಕೊಲ್ಲಿಪಾತಿಯಲ್ಲಿ ವಿವಿಧ ಸಮುದಾಯಗಳ 18 ಮಠಗಳ ನಿರ್ಮಿಸಿದ್ದಾರೆ, ಈಗಲೂ ಸಹ ಅವು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.



ಸಮಾರಂಭಕ್ಕೂ ಮುನ್ನ ಜಗದ್ಗುರು ಶ್ರೀ ರೇಣುಕಾಚಾರ್ಯ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.



ಸಮಾರಂಭದಲ್ಲಿ ಮಳವಳ್ಳಿ ತಾಲೂಕು ಧನಗೂರು ಸಿಂಹಾಸನ ಸಂಸ್ಥಾನ ಮಠದ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು, ಕೆ.ಆರ್.ಪೇಟೆ ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯಸ್ವಾಮಿ, ವಿಶೇಷ ಆಹ್ವಾನಿತರಾದ ಜಿಲ್ಲಾ ಬಸವ ಸಮಿತಿ ಅಧ್ಯಕ್ಷ ಎಂ.ಬಿ. ರಾಜಶೇಖರ್ ಮಾತನಾಡಿದರು.

ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್, ಸರ್ಕಲ್ ಇನ್ಸ್ಪೆಕ್ಟರ್ ನವೀನ್

ಜಗಜ್ಯೋತಿ ಬಸವೇಶ್ವರ ಸಹಕಾರ ಸಂಘದ ನಾಗರಾಜು, ವಿವಿಧ ಸಮಿತಿಯ ಮುಖ್ಯಸ್ಥರಾದ ಕೆ.ಎಸ್. ಷಡಕ್ಷರಿ, ಎಂ.ಎಸ್.ಶಿವಪ್ರಕಾಶ್, ಗೊರವಾಲೆ ಚಂದ್ರಶೇಖರ್ ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ