Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು: ಜಿಲ್ಲಾಧಿಕಾರಿ ಜಗದೀಶ ಜಿ ಎಚ್ಚರಿಕೆ.





ಬೆಂಗಳೂರು ನಗರ ಜಿಲ್ಲೆ ಮೇ. 6  :- ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ.

ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.



ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ತಪಾಸಣೆ ನಡೆಸಿದ ವಾಹನಗಳು ಅನಧಿಕೃತವಾಗಿ ಗೋವು / ಒಂಟೆಗಳನ್ನು ಸಾಗಿಸುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ ವಾಹನದಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಅದೇ ವಾಹನದಲ್ಲಿ ಸಾಗಿಸಿ ಸುರಕ್ಷಿತಗೊಳಿಸುವಂತೆ ಸೂಚನೆ ನೀಡಿದರು.



‘ಒಂಟೆ, ಗೋವುಗಳ ಹತ್ಯೆ ಮಾಡುವುದು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಣೆ ಮೂಲಕ ಜಿಲ್ಲೆಗೆ ತರುವುದು ಅಪರಾಧವಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಕರಪತ್ರ ಹಾಗೂ ಆಟೊರಿಕ್ಷಾ ಪ್ರಚಾರ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದ ಅವರು ನಗರದ ಹೊರ ವಲಯಗಳಲ್ಲಿ, ಅಂದರೆ ಮೈಸೂರು ರಸ್ತೆ (ಕುಂಬಳಗೂಡು), ತುಮಕೂರು ರಸ್ತೆ (ಎಕ್ಸಿಬ್ಯೂಷನ್ ಕೇಂದ್ರ) ಮಾಗಡಿ ರಸ್ತೆ (ತಾವರೆಕೆರೆ), ಹೊಸೂರು ರಸ್ತೆ (ಅತ್ತಿ ಬೆಲೆ), ಹಳೆ ಮದ್ರಾಸ್ ರಸ್ತೆ (ಹೊಸಕೋಟೆ ಹತ್ತಿರ) ಸೇರದ ಒಟ್ಟು 10 ತಪಾಸಣಾ ಕೇಂದ್ರಗಳನ್ನು ಸಾರಿಗೆ ಇಲಾಖೆ ನೇತೃತ್ವದಲ್ಲಿ ನಿರ್ಮಿಸಿ, ಎಲ್ಲಾ ಕೇಂದ್ರಗಳಲ್ಲಿ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.



ಅಕ್ರಮವಾಗಿ ಒಂಟೆ/ ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಬೆಂಗಳೂರು ನಗರ ಪಾಲಿಕೆಗಳ ಸಹಾಯವಾಣಿ 1533ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರ ವಹಿಸಬೇಕು.



ಪ್ರಾಣಿ ವಧೆಯಿಂದ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಯನ್ನು ನಿಯಮಾನುಸಾರ ನಿರ್ವಹಣೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.



ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಪಶುಪಾಲನ ಇಲಾಖೆಯ ಉಪ ನಿರ್ದೇಶಕ ಡಾ. ಪರಮೇಶ್ವರ್ ರವರು ಹಾಗೂ ಜಿ. ಬಿ. ಎ ಉಪ ನಿರ್ದೇಶಕರಾದ ಡಾ. ಚಂದ್ರಯ್ಯ ರವರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ