Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಕಂಡುಬಂದಲ್ಲಿ ದೂರು ಸಲ್ಲಿಸಿ: ಜಂಟಿ ಕೃಷಿ ನಿರ್ದೇಶಕರು



ಕೊಪ್ಪಳ ಜುಲೈ 11: ಕೊಪ್ಪಳ ಜಿಲ್ಲೆಗೆ ಬೇಡಿಕೆಯ ಅನ್ವಯ ರಸಗೊಬ್ಬರಗಳು ಸರಬರಾಜಾಗುತ್ತಿದ್ದು ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಉಲ್ಲಂಘನೆಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಅದರಂತೆ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಇವರ ಪರಿಶೀಲನೆಯಲ್ಲಿ ಕಂಡುಬಂದಿದ್ದು, ಮಾರಾಟಗಾರರಾದ ಕೊಪ್ಪಳದ ಎಸ್.ಜಿ.ಗಂಜ್‌ನ ಶ್ರೀ ನಾಗರಾಜ ಟ್ರೇಡಿಂಗ್ ಕಂಪನಿಯ ರಸಗೊಬ್ಬರ ಮಾರಾಟ ಪರವಾನಿಗೆಯನ್ನು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಕ್ಲಾಸ್ 3, 4, 5, 8 ಮತ್ತು 35 ರ ಉಲ್ಲಂಘನೆಗಳಿಗಾಗಿ ಅಮಾನತ್ತುಗೊಳಿಸಲಾಗಿದೆ ಹಾಗೂ ಕನಕಗಿರಿಯ ತಾವರಗೇರಾ ರಸ್ತೆಯ ಲಲಿತಾ ಟ್ರೇಡರ್ಸ್ ಮಳಿಗೆಯು ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಕ್ಕಾಗಿ ರಸಗೊಬ್ಬರ ಮಾರಾಟ ಪರವಾನಿಗೆಯನ್ನು ಅಮಾನತ್ತುಗೊಳಿಸಲಾಗಿರುತ್ತದೆ. ರಸಗೊಬ್ಬರ ನಿಯಂತ್ರಣ ಆದೇಶ 1985 ರ ಉಲ್ಲಂಘನೆಗಾಗಿ ಕಾರಟಗಿ ತಾಲ್ಲೂಕಿನ ಸಿದ್ದಾಪೂರದ ಶ್ರೀ ಸಪ್ತಗಿರಿ ಟ್ರೇಡರ್ಸ್ ಹಾಗೂ ಗಂಗಾವತಿಯ ಅದಿತಿ ಏಜೇನ್ಸಿಸ್ ಇವರ ರಸಗೊಬ್ಬರ ಮಾರಾಟ ಪರವಾನಿಗೆಗಳನ್ನು ರದ್ದುಗೊಳಿಸಲಾಗಿರುತ್ತದೆ.

ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್ ಅನ್ನು ನೀಡದೇ ಇದ್ದಲ್ಲಿ ಅಥವಾ ಕೃಷಿ ಪರಿಕರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರ ಕಂಡುಬಂದಲ್ಲಿ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ), ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಪ್ಪಳ ಮೊ.ಸಂ. 8277932117 ಇವರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ