Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫೆ.24 ರಂದು ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ


ಬಳ್ಳಾರಿ,ಫೆ.21

ಇದೇ ಫೆ.24 ರಂದು ಬಳ್ಳಾರಿ ನಗರದ ಶ್ರೀ ಕನಕ ದುರ್ಗಮ್ಮ ಸಿಡಿಬಂಡಿ ರಥೋತ್ಸವ ಜರುಗಲಿದ್ದು, ರಥೋತ್ಸವ ವೀಕ್ಷಿಸಲು ಆಗಮಿಸುವ ಸಾರ್ವಜನಿಕರಿಗೆ ನಗರದ ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಿಳಿಸಿದ್ದಾರೆ.

ಮೋಕ ಭಾಗದಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಗಾಂಧಿನಗರ 1ನೇ ಕ್ರಾಸ್ ಹತ್ತಿರವಿರುವ ಅಲ್ಲಂ ಸುಮಂಗಳಮ್ಮ ಕಾಲೇಜು ಆವರಣದಲ್ಲಿ, ಕಪ್ಪಗಲ್ ಕಡೆಯಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಕಪ್ಪಗಲ್ ರಸ್ತೆಯಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ಶಾಲೆಯ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಸಿರುಗುಪ್ಪ ಹಾಗೂ ಹೊಸಪೇಟೆ ಭಾಗದಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಬಸವ ಭವನ ಹಾಗೂ ಜಿಲ್ಲಾ ಕೇಂದ್ರ ಕಾರಾಗೃಹದ ಮುಂದಿನ ಖಾಲಿ ಜಾಗದಲ್ಲಿ, ಬೆಂಗಳೂರು ರಸ್ತೆ ಹಾಗೂ ಅನಂತಪುರ ಕಡೆಯಿಂದ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಕಮ್ಮಾ ಭವನದ ಮುಂದಿನ ಖಾಲಿ ಜಾಗ ಹಾಗೂ ಮುನಿಸಿಪಲ್ ಕಾಲೇಜು ಅವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಬಳ್ಳಾರಿ ನಗರದ ಯು.ಬಿ ಸರ್ಕಲ್, ಜಿಲ್ಲಾ ಕೇಂದ್ರ ಕಾರಾಗೃಹದ ಗೇಟ್, ಜಿಮ್‌ಖಾನ ಕ್ರಾಸ್, ತಾಳೂರು ರಸ್ತೆಯ ಬಾಲಾಜಿ ನರ್ಸಿಂಗ್ ಹೋಂ ಕ್ರಾಸ್, ಕಪ್ಪಗಲ್ ರಸ್ತೆಯ ಸಂಜೀವಿನಿ ಅಸ್ಪತ್ರೆಯ ಕ್ರಾಸ್ ಹಾಗೂ ಮೋಕಾ ರಸ್ತೆಯ ಗಾಂಧಿನಗರ 1ನೇ ಕ್ರಾಸ್ ಗಳ ಮೂಲಕ ದುರ್ಗಮ್ಮ ಗುಡಿ ಸರ್ಕಲ್‌ಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು