Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಡಿ.06

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆನ್ ಲೈನ್ ಸೇವಾಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ. 08392 – 275182 ಗೆ ಸಂಪರ್ಕಿಸಬಹುದಾಗಿದೆ.

*ಅರ್ಜಿ ಸಲ್ಲಿಕೆಯ ವಿಧಾನ ಕುರಿತು ಕಾರ್ಯಾಗಾರ:*

ಅರ್ಜಿಗಳನ್ನು ಆನ್ ಲೈನ್ ಸೇವಾ ಸಿಂಧು ಪೋರ್ಟಲ್ ನಲ್ಲಿ ಸಮರ್ಪಕವಾಗಿ ಸಲ್ಲಿಸುವ ಕುರಿತು ಡಿ.10 ರಂದು ಸಂಜೆ 04 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.

ಜಿಲ್ಲೆಯ ಆಸಕ್ತ ಸಾಹಿತ್ಯಕ, ಸಾಂಸ್ಕೃತಿಕ ಕಲಾ ಸಂಘ - ಸಂಸ್ಥೆಗಳು, ಕಲಾವಿದರು, ಚಿತ್ರ ಮತ್ತು ಶಿಲ್ಪ ಕಲಾವಿದರು ಭಾಗವಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ