Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ"










ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ 'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ.



ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ) ರಂದು ಬೆಳಿಗ್ಗೆ 09:00 ಗಂಟೆಗೆ ಕೋಲಾರದ ಮಾಲೂರಿನಿಂದ ಹೊಸಕೋಟೆಗೆ ರಥಯಾತ್ರೆ ಆಗಮಿಸಲಿದೆ, ಆಗಸ್ಟ್ 06(ಮಂಗಳವಾರ) ರಂದು ಬೆಳಿಗ್ಗೆ 09:00 ಗಂಟೆಗೆ ಹೊಸಕೋಟೆಯಿಂದ ದೇವನಹಳ್ಳಿಗೆ, ಆಗಸ್ಟ್ 07(ಬುಧವಾರ) ರಂದು ಬೆಳಿಗ್ಗೆ 09:00 ಗಂಟೆಗೆ ದೇವನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ, ಆಗಸ್ಟ್ 08(ಗುರುವಾರ) ರಂದು ಬೆಳಿಗ್ಗೆ 09:00 ಗಂಟೆಗೆ ದೊಡ್ಡಬಳ್ಳಾಪುರದಿಂದ ನೆಲಮಂಗಲಕ್ಕೆ ಸಂಚರಿಸಲಿದೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಕನ್ನಡ ರಥಯಾತ್ರೆ ಸಂಚರಿಸಲಿದ್ದು ರಥಯಾತ್ರೆಯು ಜಿಲ್ಲೆಗೆ ಆಗಮಿಸುವ ದಿನದಿಂದ, ಜಿಲ್ಲೆಯಿಂದ ಬೀಳ್ಕೊಡುವ ದಿನಾಂಕದ ಸಮಯಗಳಲ್ಲಿ ಆಯಾ ಗ್ರಾಮ/ಗ್ರಾಮ ಪಂಚಾಯತಿ/ ತಾಲ್ಲೂಕು ಕೇಂದ್ರಗಳಲ್ಲಿ ರಥಯಾತ್ರೆಯನ್ನು ಗೌರವಯುತವಾಗಿ ಸ್ವಾಗತಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆಯೋಜಿಸಲಾಗುವ ಮೆರವಣಿಗೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಕನ್ನಡಪರ ಸಂಘಟನೆಗಳ ಎಲ್ಲಾ ಅಧ್ಯಕ್ಷರುಗಳು ಎಲ್ಲಾ ಪದಾಧಿಕಾರಿಗಳು, ಸಾಹಿತಿಗಳು, ಕಲಾವಿದರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ