Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕರ್ನಾಟಕ ಬಜೆಟ್ 2026–27 : ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ 2026–27ನೇ ಸಾಲಿನ ಬಜೆಟ್‌ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಿ ಹೊಸ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ‘ಸಮಗ್ರ ಕರಾವಳಿ ಅಭಿವೃದ್ಧಿ ಯೋಜನೆ’ ಜಾರಿಗೆ ತರಲಾಗುತ್ತದೆ. ಈ ಯೋಜನೆಯ ಮೂಲಕ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಪರಿಣತ ಮಾರ್ಗದರ್ಶಕರನ್ನು ರೂಪಿಸುವ ಉದ್ದೇಶದಿಂದ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್‌ ಆರಂಭಿಸಲಾಗುತ್ತದೆ. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆಯಿದೆ.
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮುಳ್ಳಯ್ಯನಗಿರಿ – ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್-ವೇ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಜಾರಿಯಾದರೆ ಪ್ರವಾಸಿಗರಿಗೆ ಹೊಸ ಅನುಭವ ಸಿಗಲಿದೆ.
ಇದರ ಜೊತೆಗೆ ರಾಜ್ಯದಲ್ಲಿರುವ 844 ಸಂರಕ್ಷಿತ ಸ್ಮಾರಕಗಳು ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆಗಾಗಿ “ಸ್ಮಾರಕ ಮಿತ್ರ” ಯೋಜನೆ ಜಾರಿಗೆ ತರಲಾಗುತ್ತದೆ. ಈ ಯೋಜನೆಯಡಿ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುತ್ತದೆ ಹಾಗೂ ಅವರನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರಿಸಲಾಗುತ್ತದೆ.
ಈ ಕ್ರಮಗಳಿಂದ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬಲ ಪಡೆದು ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ