Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಮಾರ್ಚ್18-21ರವರೆಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರರವರ ಭೇಟಿ

ಶಿವಮೊಗ್ಗ : ಫೆಬ್ರವರಿ 27 :  : ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾರ್ಚ್18ರಿಂದ 21ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.

ಮಾರ್ಚ್18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾರ್ಚ್19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಂದು ಸಂಜೆ 5.30ರಿಂದ 6.30ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆ, ರೇಷ್ಮೇ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳಿಗಾಗಿ ಏರ್ಪಡಿಸಲಾಗುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಾರ್ಚ್20ರಂದು ಬೆಳಿಗ್ಗೆ 9.45 ರಿಂದ 10.45ರವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನಕ್ಕೆ ಭೇಟಿ ನೀಡಿ, ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಮತ್ತು ಆಡಳಿತ ನೀಡುವಲ್ಲಿ ವಕೀಲರ ಪಾತ್ರ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವರು. ಬೆಳಿಗ್ಗೆ 11ರಿಂದ 11.30ರವರೆಗೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಪ್ರತಿವಾದಿಗಳನ್ನು ಉದ್ದೇಶಿಸಿ ಮಾತನಾಡುವರು. ಅಲ್ಲದೇ ಸಾರ್ವಜನಿಕರು ಸಲ್ಲಿಸಿದ ದೂರುಗಳು ಮತ್ತು ಕುಂದು-ಕೊರತೆಗಳ ಪರಿಹಾರಕ್ಕಾಗಿ ಅಗತ್ಯ ಕ್ರಮಕೈಗೊಳ್ಳುವರು.

ಮಾರ್ಚ್21ರಂದು ಬೆಳಿಗ್ಗೆ 9ರಿಂದ 10ರವರೆಗೆ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಜಿಲ್ಲೆಯ ಶಿವಮೊಗ್ಗ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವರು. ಅಂದು ಸಂಜೆ 6 ರಿಂದ 7ರವರೆಗೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಪಾತ್ರ ಎಂಬ ವಿಷಯದ ಕುರಿತು ನ್ಯಾಯಾಧೀಶರೊಂದಿಗೆ ಸಂವಾದ ನಡೆಸುವರು.

ಅಂದು ರಾತ್ರಿ 11ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ