Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ದಿವಂಗತ IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ

ಕುಮಾರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಸಹಾಯಕ ಹುದ್ದೆ

ಬೆಂಗಳೂರು:
ರಸ್ತೆ ಅಪಘಾತದಲ್ಲಿ ನಿಧನರಾದ ದಿವಂಗತ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಕುಮಾರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೇವೆಯಲ್ಲಿದ್ದ ಸಂದರ್ಭದಲ್ಲಿ ದಿನಾಂಕ 25-11-2025 ರಂದು ದುರಂತ ರಸ್ತೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಅವರ ಕುಟುಂಬದ ಸಂಕಷ್ಟವನ್ನು ಮನಗಂಡ ರಾಜ್ಯ ಸರ್ಕಾರ, ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1) ರನ್ವಯ ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಗೆ ನೇಮಕಾತಿ ನೀಡಿದೆ.


ಆದೇಶದ ಪ್ರಕಾರ, ನೇಮಕಾತಿ ಎರಡು ವರ್ಷಗಳ ಪರೀಕ್ಷಾರ್ಥಾವಧಿಯೊಂದಿಗೆ ಜಾರಿಯಾಗಿದ್ದು, ಸಹಾಯಕ ಹುದ್ದೆಗೆ ನಿಗದಿಪಡಿಸಿರುವ ವೇತನ ಶ್ರೇಣಿ ರೂ. 49,050 ರಿಂದ ರೂ. 92,500 ಆಗಿರಲಿದೆ.
ನಿಯಮಾವಳಿಗಳಂತೆ, ನೇಮಕಾತಿ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳ ಒಳಗಾಗಿ ಅಭ್ಯರ್ಥಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ-1), ಬೆಂಗಳೂರು ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಜೊತೆಗೆ, ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಾವಳಿ 1977ರಂತೆ ಅಗತ್ಯ ನಡತೆ ಪ್ರಮಾಣಪತ್ರಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ದಿವಂಗತ ಅಧಿಕಾರಿ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡಿದ ಈ ಮಾನವೀಯ ಸ್ಪಂದನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ