Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

 

ಬಳ್ಳಾರಿ,ಜ.29
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ನಡೆಯುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಚಲಿತ ವಿದ್ಯಮಾನಗಳಿಂದ ಮಹಿಳಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿರುವಂತಹ ಹಾಗೂ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡಂತಹ ಮತ್ತು ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ “ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ” ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಈ ವಿವಿಧ ಕ್ಷೇತ್ರಗಳಲ್ಲದೇ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ “ವೀರಮಹಿಳೆ” ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ.
ಅರ್ಹ ಮಹಿಳೆಯರು ನಿಗದಿತ ನಮೂನೆ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ನಗರದ ಎಸ್‌ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ.05 ಕೊನೆಯ ದಿನವಾಗಿದೆ.
*ಷರತ್ತುಗಳು:*
18 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಹಾಗೂ ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 1 ರಿಂದ ಡಿಸೆಂಬರ್ 31ರ ಒಳಗೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ.
----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ