Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕುರುಗೋಡು ಪುರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.03
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಬಡ ಜನರು ಮತ್ತು ವಿಶೇಷಚೇತನರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
*ಸೌಲಭ್ಯಗಳು:*
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ರಾಜ್ಯ ಅಥವಾ ರಾಷ್ಟç ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರ ವ್ಯಾಸಂಗೇತರ ಸ್ಪರ್ಧೆಗಳಲ್ಲಿ ಭಾಗವಹಿಸಿದ ಅಥವಾ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.
ವಿಕಲಚೇತನರಿಗೆ ವಾಟರ್ ಬೆಡ್ ವಿತರಣೆ: ಕುರುಗೋಡು ಪಟ್ಟಣದ ವಿಕಲಚೇತನರಿಗೆ ವಾಟರ್ ಬೆಡ್‌ಗಳನ್ನು ಪೂರೈಸಲಾಗುವುದು.
*ಅಗತ್ಯವಿರುವ ದಾಖಲಾತಿಗಳು:*
ಅರ್ಜಿದಾರರು ಕುರುಗೋಡು ಪುರಸಭೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ವಿದ್ಯಾರ್ಥಿಗಳ ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳು, ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ವಿಕಲಚೇತನರು ಶೇ.75 ಕ್ಕಿಂತ ಹೆಚ್ಚು ವಿಕಲಚೇತನರಾಗಿದ್ದು, ವೈದ್ಯಾಧಿಕಾರಿಗಳು (ತಾಲೂಕು/ಜಿಲ್ಲಾ ಆಸ್ಪತ್ರೆ) ನೀಡಿದ ಅಂಗವೈಕಲ್ಯ ಪ್ರಮಾಣ ಪತ್ರದ ಪ್ರತಿ.
ಅರ್ಜಿ ಸಲ್ಲಿಸಲು ಜೂ.09 ರಂದು ಸಂಜೆ 4:30 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಪುರಸಭೆ ಕಾರ್ಯಾಲಯದ ಸೂಚನಾ ಫಲಕವನ್ನು ನೋಡಬಹುದು ಅಥವಾ ಸಂಬAಧಿಸಿದ ಶಾಖೆಯ ಸಿಬ್ಬಂದಿಯಿAದ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ