Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಾಲ ಭವನ ಮಕ್ಕಳ ಪ್ರತಿಭೆ ಹೊರ ತರುವ ವೇದಿಕೆ - ಕೆ.ವಿ.ಪ್ರಭಾಕರ್

ಕೊಪ್ಪಳ ಮಾರ್ಚ್ 09 : ಪ್ರತಿಯೊಂದು ಮಗುವಿನಲ್ಲಿ ತನ್ನದೇ ಆದ ಪ್ರತಿಭೆ ಅಡಗಿದ್ದು, ಬಾಲ ಭವನವು ಮಕ್ಕಳೊಳಗಿನ ಪ್ರತಿಭೆ ಹೊರ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.

ಅವರು ಭಾನುವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ರಾಜ್ಯ ಬಾಲ ಭವನ ಸೊಸೈಟಿ (ರಿ)ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಪ್ಪಳ ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ 2025ರ ಮಕ್ಕಳ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್‌ನಲ್ಲಿ ಅಲ್ಲ. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್‌ನಲ್ಲಿ ತೋರಿಸುವುದರಿಂದ ಬೆಳೆಯುತ್ತಾ ಬೆಳೆಯುತ್ತಾ ಮಕ್ಕಳು ಮೊಬೈಲ್‌ಗೇ ಅಂಟಿಕೊಳ್ಳುತ್ತಾರೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಮಕ್ಕಳು ಸ್ವತಂತ್ರವಾಗಿ ಆಲೋಚಿಸುವುದನ್ನು ಕಲಿತಾಗ ಅವರಲ್ಲಿ ಸೃಜನಶೀಲತೆ ಅರಳುತ್ತದೆ. ಸ್ವಂತಕ್ಕೆ ಆಟದ ಸಾಮಾನುಗಳನ್ನು ಸೃಷ್ಟಿಸಿಕೊಳ್ಳುವುದು ಮಕ್ಕಳ ಮೊದಲ ಸೃಜನಶೀಲ ಕ್ರಿಯೆಯಾಗಿದ್ದು, ಪೋಷಕರು ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಬೇಕು. ಮನೆಯಿಂದ ಹೊರಗೆ ಮಕ್ಕಳು ಆಟಕ್ಕೆ ಇಳಿದಾಗ ಕೈಗೆ ಸಿಕ್ಕ ಸಾಮಾಗ್ರಿಗಳೇ ಅವರ ಆಟದ ವಸ್ತುಗಳಾಗುತ್ತವೆ. ಕೇವಲ ನಾಲ್ಕು ಗೋಡೆ ಮಧ್ಯೆ ಕುಳ್ಳಿರಿಸಿ ಪ್ಲಾಸ್ಟಿಕ್ ಆಟದ ವಸ್ತುಗಳು, ಮೊಬೈಲ್‌ಗಳ ಗೀಳು ಹಚ್ಚಿಕೊಳ್ಳುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಟಿತಗೊಳ್ಳುತ್ತದೆ. ನಾವೆಲ್ಲಾ ಆಡುವಾಗ ಪ್ಲಾಸ್ಟಿಕ್ ವಸ್ತುಗಳ ಹಾವಳಿಯಾಗಲಿ, ಮೊಬೈಲ್‌ಗಳ ಚಾಳಿಯಾಗಲಿ ಇರಲಿಲ್ಲ. ಹೀಗಾಗಿ ನಮಗೆ ಪುಸ್ತಕಗಳು, ಮಣ್ಣಿನ ವಸ್ತುಗಳು ಹೆಚ್ಚು ಹತ್ತಿರವಾದವು. ಕೆಳಗೆ ಕುಳಿತಿರುವ ಮಕ್ಕಳುಗಳು ಮುಂದಿನ ದಿನಗಳಲ್ಲಿ ಇಲ್ಲಿ ಮೇಲೆ ಕೂರುವಂತಾಗಬೇಕು ಎಂದರೆ ಪುಸ್ತಕಗಳ ಒಡನಾಟ ಮುಖ್ಯ. ಇರದಿಂದ ಓದು, ಬರಹದ ಜೊತೆಗೆ ಗ್ರಹಿಕೆಯೂ ಉತ್ತಮಗೊಳ್ಳುತ್ತದೆ, ಜೊತೆಗೆ ಗ್ರಹಿಕೆಯೂ ವೃದ್ಧಿಯಾಗುತ್ತದೆ ಎಂದರು.

ಮಕ್ಕಳಿಗೆ ಪೋಷಕರೇ ಪ್ರಥಮ ಗುರು. ಆದ್ದರಿಂದ ಮಕ್ಕಳು ಪೋಷಕರ ಮಾತನ್ನು ಕೇಳಿಸಿಕೊಳ್ಳಬೇಕು. ಮಕ್ಕಳು ದೊಡ್ಡವರಾದ ಮೇಲೆ ಪೋಷಕರನ್ನು ಅಷ್ಟೇ ಜವಾಬ್ದಾರಿಯಿಂದ, ಪ್ರೀತಿಯಿಂದ ನೋಡಿಕೊಳ್ಳಬೇಕು. ಆಟೋಚಾಲಕರ ಮಕ್ಕಳು, ಪಂಕ್ಚರ್ ಅಂಗಡಿಯವರ ಮಕ್ಕಳೆಲ್ಲಾ ಈಗ ಉನ್ನತ ಶಿಕ್ಷಣದಲ್ಲಿ ಚಿನ್ನದ ಪದಕ ಪಡೆಯುತ್ತಿದ್ದಾರೆ. ತಂದೆ ತಾಯಿಗೆ ಇದಕ್ಕಿಂತ ಖುಷಿಯ ಸಂಗತಿ ಬೇರೆ ಇಲ್ಲ. ಆದ್ದರಿಂದ ಮಕ್ಕಳು ಪೋಷಕರ ಶ್ರಮ, ಪ್ರೀತಿ, ಕಾಳಜಿಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಕರೆ ನೀಡಿ, ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯುವಂತೆ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡುವ ಮನೋಭಾವನ್ನು ಇಟ್ಟುಕೊಂಡಾಗ ಮಾತ್ರ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯವಾಗಿದೆ. ಎಲ್ಲಾ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಮಕ್ಕಳ ಶಿಕ್ಷಣದಡಿ ಕೇವಲ ಶಿಕ್ಷಕರ ಪಾತ್ರ ಅಷ್ಟೇ ಅಲ್ಲದೇ ಪೋಷಕರ ಜವಾಬ್ದಾರಿಯೂ ಹೆಚ್ಚಾಗಿದೆ. ಮಕ್ಕಳಿಗೆ ಮೋಬೈಲ್‌ನಿಂದ ಆದಷ್ಟು ದೂರವಿಡಬೇಕು. ಮಕ್ಕಳಲ್ಲಿ ಅನೇಕ ಪ್ರತಿಭೆಗಳು ಅಡಗಿರುತ್ತವೆ. ಕೆಲ ಮಕ್ಕಳು ಅವಕಾಶ ವಂಚಿತರಾಗಿ ತಮ್ಮ ಪ್ರತಿಭೆಗಳನ್ನು ಕಳೆದುಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಬಾಲ ಭವನವು ಮಕ್ಕಳ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶಗಳನ್ನು ನೀಡುತ್ತಿದೆ. ನಮ್ಮ ಸರ್ಕಾರವು ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಕೋಟಿ ರೂ.ಗಳನ್ನು ನೀಡಿದ್ದು, ಇದರಲ್ಲಿ ಶೇ.25ರಷ್ಟನ್ನು ಶಿಕ್ಷಣಕ್ಕಾಗಿ ಮೀಸಲಿರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಮುಖ್ಯತೆ ನೀಡಿದೆ. ಮಕ್ಕಳನ್ನು ಭವಿಷ್ಯದ ನಾಗರಿಕರನ್ನಾಗಿ ಮಾಡುವ ಜಬಾವ್ದಾರಿ ಎಲ್ಲರ ಮೇಲಿದ್ದು, ಇದಕ್ಕಾಗಿ ಶ್ರಮಿಸೋಣ ಎಂದು ಹೇಳಿದರು.

ರಾಜ್ಯ ಬಾಲ ಭವನ ಸೊಸೈಟಿಯ ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರು ಮಾತನಾಡಿ, ಮಕ್ಕಳಿಗೆ ಓದುವ ಕುರಿತು ಒತ್ತಡ ನೀಡದೇ, ಸೃಜನಾತ್ಮಕ ಕಲೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸದರೆ, ಅವರಿಗೆ ಓದುವುದರಲ್ಲಿ ಆಸಕ್ತಿ ತಾನಾಗಿಯೇ ಬರುತ್ತದೆ. ಮಕ್ಕಳನ್ನು ವಿವಿಧ ಸ್ಪರ್ಧೆ, ಕಲೆ, ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು. ಈ ಹಿನ್ನೆಲೆಯಲ್ಲಿ ಬಾಲ ಭವನವು ಯಾವಾಗಲೂ ಮಕ್ಕಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸದಾ ಸಿದ್ಧವಿದೆ ಎಂದರು.

ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿ, ಸಿಸಿಗಳನ್ನು ಯಾವ ರಿತಿ ಬೆಳೆಸುತ್ತೇವೆ, ಅದೇ ರೀತಿ, ಮಕ್ಕಳನ್ನು ಅಂಗನವಾಡಿ ಹಂತದಲ್ಲಿಯೇ ಆಡ ಹಾಗೂ ಇತರೆ ಕಲಿಕೆ ನೀಡುವುದರ ಮೂಲಕ ಬೆಳೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸುಸಜ್ಜಿದ ವ್ಯವಸ್ಥೆಗಳನ್ನು ಸರ್ಕಾರವು ಹಮ್ಮಿಕೊಳ್ಳುತ್ತಿದೆ. ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, 2025-26ನೇ ಸಾಲಿನ ನಮ್ಮ ರಾಜ್ಯದ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು 94 ಸಾವಿರ ಕೋಟಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೀಡಿದೆ. ಕಳೆದ ಬಾರಿಯ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶವು ಕಡಿಮೆಯಾಗಿದ್ದು, ಇದಕ್ಕೆ ವಿಚಾರಿಸಿದಾಗ, ಬಹಳಷ್ಟು ಮಕ್ಕಳು ಶಾಲೆಗೆ ಬಾರದೇ ಇರುವುದು ಕಂಡುಬಂದಿದೆ. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಂತಹ ಕೆಲಸವಾಗುತ್ತಿದ್ದು, ಇದಕ್ಕೆ ಪೋಷಕರು ಸಹಕರಿಸುವುದರ ಜೊತೆಗೆ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಬಾಲ್ಯವಿವಾಹಗಳು ನಡೆಯಬಾರದು. ಇತ್ತೀಚೆಗೆ ಮೂಡನಂಬಿಕೆಯ ಕಾರಣ ಚಿಕ್ಕ ಮಗುವಿಗೆ ಅಗರಬತ್ತಿಯಿಂದ ಸುಟ್ಟಿರುವುದರಿಂದ ಆ ಮಗು ಸಾವನಪ್ಪಿರುವುದು ಕಂಡುಬಂದಿದೆ. ಇಂತಹ ಪ್ರಕರಣಗಳು ಆಗದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳಬೇಕು. ಯಾವುದೇ ರೀತಿಯ ಬಯಲು ಶೌಚಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮಕ್ಕಳು ತಮ್ಮ ಮನೆಗಳಲ್ಲಿ ಮತ್ತು ಅಕ್ಕಪಕ್ಕದವರಿಗೆ ಶೌಚಾಲಯ ನಿರ್ಮಿಸಲು ತಿಳುವಳಿಕೆ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗಣ್ಯರಾದ ಗಿರೀಶ್ ಕೋಟೆ, ನಟರಾಜ್, ಲಕ್ಷ್ಮೀ ನಾರಾಯಣ, ಗೂಳಪ್ಪ ಹಲಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಪರಶುರಾಮ ವಾಯ್. ಶೆಟ್ಟೆಪ್ಪನವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ ಸೇರಿದಂತೆ ವಿವಿಧ ತಾಲ್ಲೂಕಿಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಸಂಗೀತ ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ