Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ ನೆರವಾಗೋಣ : ಡಿಸಿ


ಶಿವಮೊಗ್ಗ,ಡಿ.8ಸಶಸ್ತç ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಸೋಮವಾರ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಧ್ವಜ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

1949 ರಿಂದ ಪ್ರತಿ ವರ್ಷ ಸೈನಿಕ ಧ್ವಜ ದಿನವನ್ನು ಆಚರಿಸಲಾಗುತ್ತಿದೆ. ಧ್ವಜ ದಿನಾಚರಣೆ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣವನ್ನು ನಿವೃತ್ತ ಸೈನಿಕರ ಕುಟುಂಬ, ಅವರ ಅವಲಂಬಿತರ ಕಲ್ಯಾಣಕ್ಕಾಗಿ ಹಾಗೂ ಯುದ್ದದಲ್ಲಿ ಅಂಗವಿಕಲತೆಗೆ ಒಳಗಾದ ಸೈನಿಕರ ನೆರವಿಗಾಗಿ ಬಳಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದ ಅವರು ಶಿವಮೊಗ್ಗ ಜಿಲ್ಲೆ ಧ್ವಜ ವಂತಿಗೆ ಸಂಗ್ರಹದಲ್ಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳಲ್ಲಿ ಮಾದರಿಯಾಗಲಿ ಎಂದರು ಆಶಿಸಿದರು.

ಪುರೋಹಿತರಾದ ನಾಗರಾಜ್ ಎಂಬುವವರು ಧ್ವಜ ದಿನಾಚರಣೆ ಅಂಗವಾಗಿ ರೂ.25000 ಗಳ ವಂತಿಗೆಯನ್ನು ನೀಡಿದ್ದು ಅವರನ್ನು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಗೌರವಿಸಿ, ನಾಗರಾಜ್‌ರವರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಸೈನಿಕ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ(ಪ್ರ)ರಾದ ಡಾ.ಸಿ.ಎ.ಹಿರೇಮಠ ಮಾತನಾಡಿ, ಈ ಬಾರಿ ಧ್ವಜ ವಂತಿಗೆಯ ಸಂಗ್ರಹದಲ್ಲಿ ಉತ್ತಮವಾಗಿ ಗುರಿ ಸಾಧನೆ ಮಾಡಲಾಗಿದೆ. ಧ್ವಜ ದಿನದ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣದಿಂದ ನಿವೃತ್ತ ಸೈನಿಕರು, ಅವರ ಅವಲಂಬಿತರಿಗೆ ಅನುಕೂಲ ಮಾಡಿಕೊಡಲಾಗುವುದು. ವಂತಿಗೆ ಹಣ ಹೆಚ್ಚಾದರೆ ಹೆಚ್ಚಿನ ಅನುಕೂಲ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು, ಸಾರ್ವಜನಿಕ ಸಹಕಾರ ಸಿಕ್ಕರೆ ಒಳ್ಳೆಯದು ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರ ಅವಲಂಬಿತರು, ಎನ್‌ಸಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ