Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿಕೆ ಸಮಾಜ ಸುಧಾರಣೆಯ ಹರಿಕಾರ ಬಾಬು ಜಗಜೀವನರಾಂ


ಬಳ್ಳಾರಿ,ಏ.08

ಬಾಬು ಜಗಜೀವನರಾಂ ಅವರು ಬುದ್ಧ, ಬಸವ, ಅಂಬೇಡ್ಕರರAತೆ ಸಮಾಜ ಸುಧಾರಣೆಯ ಧೋರಣೆಗಳನ್ನು ಸದಾಕಾಲ ಹೊಂದಿದ್ದರು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಹೇಳಿದರು.

ಸೋಮವಾರ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಬಾಬು ಜಗಜೀವನರಾಂ ಸಂಶೋಧನಾ ಮತ್ತು ಅಧ್ಯಯನ ಕೇಂದ್ರ ಹಾಗೂ ಬೆಂಗಳೂರು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಪ.ಜಾ/ ಪ.ಪಂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಸಂಶೋಧನಾ ವಿಧಾನ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬಳ್ಳಾರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಮೌಢ್ಯ ಆಚರಣೆಯ ಪದ್ಧತಿಗಳಾದ ದೇವದಾಸಿ, ಜಾತಿ ಪದ್ಧತಿ, ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆಯಂತಹ ಹಲವಾರು ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ನಡೆಸಿ ಅವುಗಳ ನಿರ್ಮೂಲನೆಗೆ ಬಾಬೂಜಿ ಅವರು ನಿರಂತರ ಹೋರಾಟ ಮಾಡಿದ್ದರು ಎಂದು ತಿಳಿಸಿದರು.

ಸಂಶೋಧನಾ ವಿದ್ಯಾರ್ಥಿಗಳು ಬಾಬು ಜಗಜೀವನರಾಂ ಅವರ ಜೀವನ ಸಾಧನೆಯನ್ನು ಅಧ್ಯಯನ ಮಾಡಿ, ಅವರಲ್ಲಿದ್ದ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಲಿಡ್ಕರ್ ಅಭಿವೃದ್ಧಿ ನಿಗಮವು ತನ್ನ ಅಧೀನಕ್ಕೆ ಒಳಪಡುವ ಉಪಜಾತಿಗಳ ಫಲಾನುಭವಿಗಳಿಗೆ, ಮಹಿಳೆಯರಿಗೆ ವಿಶೇಷ ತರಬೇತಿ ನೀಡುವುದು, ವಿವಿಧ ಕೌಶಲ್ಯಗಳ ತರಬೇತಿಗೆ ಬೆಂಗಳೂರು, ತಮಿಳುನಾಡು ಹಾಗೂ ಇಂಡೋನೇಷ್ಯಾ ದೇಶಕ್ಕೆ ಕಳುಹಿಸಿ ಕೈಗಾರಿಕಾ ತರಬೇತಿ ಒದಗಿಸುತ್ತಿದ್ದು, ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನೀಲ್ ಕುಮಾರ್ ಅವರು ದಿಕ್ಸೂಚಿ ಭಾಷಣದಲ್ಲಿ ಮಾತನಾಡಿ, ಸಂಶೋಧನೆಗೆ ಎಐ ಮತ್ತು ಮಷಿನ್ ಲರ್ನಿಂಗ್ ನಂತಹ ಸಾಧನಗಳನ್ನು ಬಳಸುವ ಮೂಲಕ ಒಳ್ಳೆಯ ಫಲಿತಾಂಶವನ್ನು ಪಡೆಯಬಹುದು. ಯಾವುದೇ ಮಾದರಿಯ ಸಂಶೋಧನೆಗೆ ವಸ್ತುನಿಷ್ಠತೆ, ನಿರ್ದಿಷ್ಟ ಉದ್ದೇಶಗಳು ಹಾಗೂ ನೀತಿ ಸಂಹಿತೆ ಪಾಲಿಸಬೇಕು. ಇದರಿಂದ ಸಂಶೋಧನೆಯಲ್ಲಿ ನೈಜವಾದ ದತ್ತಾಂಶಗಳು ಸಂಶೋಧನೆಯ ವಿಶ್ವಾಸಾರ್ಹತೆಯನ್ನು ಹೆಚ್ಚಿಸುತ್ತದೆ ಎಂದರು.

ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಮಾತನಾಡಿ, ರಾಜ್ಯದ ಬಹುತೇಕ ವಿವಿಗಳಲ್ಲಿರುವ ಅಧ್ಯಯನ ಪೀಠಗಳು ಆಳವಾದ ಮತ್ತು ಸ್ಥೂಲವಾದ ಉತ್ಕೃಷ್ಟ ಸಂಶೋಧನೆಯನ್ನು ಹೊರ ತರಲು ಮುಂದಾಗಬೇಕು ಎಂದು ತಿಳಿಸಿದರು.

ಬಾಬು ಜಗಜೀವನರಾಂ ಅವರ ಕುರಿತು ಅತ್ಯುತ್ತಮ ಸಂಶೋಧನಾ ಲೇಖನ ಮಂಡಿಸುವ ಸಂಶೋಧನಾ ವಿದ್ಯಾರ್ಥಿಗೆ ಪೀಠದ ವತಿಯಿಂದ 10 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.

ವಿವಿಯ ವ್ಯಾಪ್ತಿಗೆ ಒಳಪಡುವ ಗ್ರಾಮೀಣ ಶಾಲೆಗಳಿಗೆ ಮೂಲಭೂತ ಸೌಕರ್ಯವನ್ನು ಒದಗಿಸಲು ವರ್ಷಕ್ಕೆ ಒಂದು ಲಕ್ಷ ರೂ. ವ್ಯಯಿಸಲು ಕಾರ್ಯಯೋಜನೆ ಸಿದ್ಧಪಡಿಸುವಂತೆ ಪೀಠದ ಸಂಯೋಜಕರಿಗೆ ಈ ಸಂದರ್ಭದಲ್ಲಿ ಸೂಚಿಸಿದರು.

ಕಾರ್ಯಾಗಾರದ ಸಂಯೋಜಕ ಡಾ.ತಿಪ್ಪೇಸ್ವಾಮಿ ಎಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಡಾ.ಸುಷ್ಮಾ ಜೋಗನ್ ನಿರೂಪಿಸಿದರು. ಡಾ.ಸಂತೋಷ ಅತಿಥಿಗಳನ್ನು ಸ್ವಾಗತಿಸಿದರು. ಸಂಶೋಧನಾರ್ಥಿ ನರಸಿಂಹ ವಂದಿಸಿದರು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಸಂಶೋಧನಾ ವಿಧಾನ ಕಾರ್ಯಾಗಾರದಲ್ಲಿ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ತಾಂತ್ರಿಕ ಗೋಷ್ಠಿಗಳು ನಡೆಯಲಿದ್ದು, ಸಂಶೋಧನಾ ಕ್ಷೇತ್ರದ ಪರಿಣಿತರು ಉಪನ್ಯಾಸ ನೀಡಲಿದ್ದಾರೆ.

ವಿವಿಯ ಎಲ್ಲ ನಿಕಾಯದ ಡೀನರು, ಎಲ್ಲ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ