Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಮಾಜದ ಹಿತ ಬಯಸುವುದೇ ಸಾಹಿತ್ಯ

 

ಬಳ್ಳಾರಿ: "ಸಾಹಿತ್ಯವು ಕೇವಲ ಮನೋರಂಜನೆಯ ಸರಕಲ್ಲ,ಅದು ವ್ಯಕ್ತಿತ್ವ ಮತ್ತು ದೇಶವನ್ನು ಕಟ್ಟುವ ಮಂತ್ರ" ಎಂದು ಶರಣ ಕುಮಾರ್ ಎಸ್. ಆರ್.ಅಭಿಪ್ರಾಯ ಪಟ್ಟರು.
      ನಗರದ ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕವು ಏರ್ಪಡಿಸಿದ್ದ   ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು    ಸಾಹಿತ್ಯವು  ಅದು ಪ್ರತಿಯೊಬ್ಬ ವ್ಯಕ್ತಿಗೆ ಜೀವನದ ಮೌಲ್ಯವನ್ನು ಕಲಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ನಾಡಿನಾದ್ಯಂತ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀಯುತ ಶರಣ ಕುಮಾರ ಎಸ್. ಆರ್.ರವರು ತಿಳಿಸಿದರು.
  ಅವರು ಇಂದಿನ ವಿದ್ಯಾರ್ಥಿಗಳಿಗೆ ತಂದೆ-ತಾಯಿ, ಗುರುಗಳ ಮೇಲೆ ಗೌರವವನ್ನು ಇರಿಸಿಕೊಳ್ಳುವುದರ ಜೊತೆಗೆ ಸಾಮಾಜಿಕ ಕಳಕಳಿಯನ್ನು, ದೇಶಾಭಿಮಾನವನ್ನು, ಭಾಷಾ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ನಾವು ನೀವೆಲ್ಲರೂ ಅವರು ಹಾಕಿ ಕೊಟ್ಟ ದಾರಿಯಲ್ಲಿ ಸಾಗಿದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

 ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತ ಆಲಂಬಷರವರು ಹೇಮ- ವೇಮರ ಪರಂಪರೆ ಕುರಿತು ಉಪನ್ಯಾಸ ನೀಡಿದರು, ಬಡ ಕುಟುಂಬದಲ್ಲಿ ಬೆಳೆದ ವೇಮರ ಮನ ಪರಿವರ್ತನೆ ಮಾಡುವಲ್ಲಿ ಹೇಮರೆಡ್ಡಿ ಮಲ್ಲಮ್ಮನ ಪಾತ್ರ ಬಹಳ ದೊಡ್ಡದು ಎಂದು ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.
 ಮುಖ್ಯ ಅತಿಥಿಗಳಾದ ಶ್ರೀ ಸಂತೋಷ್ ಕುಮಾರ್. ಸಿ. ಸಹಾಯಕ ಪ್ರಾಧ್ಯಾಪಕರು ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಇವರು ತಮ್ಮ ಅತಿಥಿ ನುಡಿಯಲ್ಲಿ ಸಾವಯವ ಕೃಷಿ ಬಗ್ಗೆ ಮಾತನಾಡುತ್ತಾ ಅಂದು ಅನ್ನ, ಅಕ್ಷರ, ಔಷಧಿ  ಜೀವವನ್ನು ಉಳಿಸಿದರೆ ಇಂದು ವ್ಯಾಪಾರವಾಗಿದೆ, ಆಹಾರ ವಿಷವಾಗಿ ಬದಲಾಗುತ್ತಿದೆ  ರೈತರು ಬೆಳೆ ಬೆಳೆಯುವ ಪದ್ಧತಿಯನ್ನು ಬದಲಿಸಬೇಕಾಗಿದೆ ಹಣಕ್ಕಿಂತ ಆರೋಗ್ಯ ಮುಖ್ಯ ಎಂಬುದನ್ನು ನಾವು ನೀವೆಲ್ಲರೂ ಅರಿಯಬೇಕಾಗಿದೆ ಎಂದು ತಿಳಿಸಿದರು.
 ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ತಾಲೂಕು ಘಟಕದ ಅಧ್ಯಕ್ಷರಾದ ನಾಗರೆಡ್ಡಿ ಕೆ.ವಿ. ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ದತ್ತಿಯ ಮಹತ್ವ ಮತ್ತು ಉದ್ದೇಶವನ್ನು ತಿಳಿಸಿದರು.
 ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಯುತ ಶಶಿಧರ್ ಪಿ.ಜಿ., ಎಸ್ ಶಾಮಣ್ಣ, ಚಾಂದ್ ಪಾಷಾ, ಡಾ. ಶ್ರೀನಿವಾಸ್ ಮೂರ್ತಿ, ದತ್ತಿದಾನಿಗಳಾದ ಬಿ.ಆರ್. ಗೌಡ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಸುಲೇಖ ಬಿ. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
 ಕಾರ್ಯಕ್ರಮದ ಪ್ರಾರಂಭದಲ್ಲಿ ಕುಮಾರಿ ಕೃಷ್ಣವೇಣಿ ಪ್ರಾರ್ಥಿಸಿದರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕಾರ್ತಿಕ್ ಮರಿಸ್ವಾಮಿ ಮಠ ರವರು ಸ್ವಾಗತಿಸಿ ಕೊನೆಗೆ ವಂದಿಸಿದರು. ಕಾರ್ಯಕ್ರಮದಲ್ಲಿ ಆಗಮಿಸಿದ ಗಣ್ಯಮಾನ್ಯರನ್ನು ಗೌರವಿಸಿ ಸತ್ಕರಿಸಲಾಯಿತು .

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ