Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮೇ 01 ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ


ಬಳ್ಳಾರಿ,ಏ.28

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮೇ 01 ರಂದು ಸಂಜೆ 06.30 ಗಂಟೆಗೆÀ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಕಮಲರತ್ನ ಬಂತೇಜಿ ಸೇರಿದಂತೆ ಇತರರು ಭಾಗವಹಿಸುವರು.

ಬಳ್ಳಾರಿಯ ಎಸ್‌ಎಸ್‌ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸೋಮನಾಥ್ ಸಿ.ಹೆಚ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಸಿರುಗುಪ್ಪ ದಳವಾಯಿ ಅಂಬಣ್ಣ ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.

*ಮೆರವಣಿಗೆ:*

ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಬಳ್ಳಾರಿ ನಗರದ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊAಡು ಗಡಿಗೆ ಚನ್ನಪ್ಪ ವೃತ್ತ, ಡಾ.ರಾಜ್ ಕುಮಾರ್ ರಸ್ತೆ, ಇಂದಿರಾ ವೃತ್ತ, ಸಾಂಸ್ಕೃತಿಕ ಸಮುಚ್ಚಯದ ಸಭಾಂಗಣದವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ