Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ : ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ), ಜೂನ್.06) : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸವಿತಾ ಸಮಾಜ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. 18 ರಿಂದ 55 ವರ್ಷಗಳಿಂದ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯಲ್ಲಿರುವಂತೆ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಪಲಾನುಭಾವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಯೋಜನೆಗಳ ವಿವರ: ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ (ಈ ಯೋಜನೆಯಡಿ ಅರ್ಜಿ  www.kaushalkar.com     ನಲ್ಲಿ ಸಲ್ಲಿಸಬೇಕು).
ಅರ್ಜಿಗಳನ್ನು ಬೆಂಗಳೂರುಒನ್, ಕರ್ನಾಟಕಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್‌ನಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ.ಬ್ಲಾಕ್ ನ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು