Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಮಡಿಕೇರಿ ಆ.06ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್ಸೈಟ್ www.km.md.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು.

ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ.08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ