Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಹೆಚ್. ಡಿ ಕುಮಾರಸ್ವಾಮಿ


ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿಯಾಗಿದ್ದು,



ಮಹಿಳೆಯರು ಮಹಿಳೆಯರಿಗಾಗಿ ಒತ್ತಾಸೆಯಾಗಿ ನಿಂತು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್. ಡಿ ಕುಮಾರಸ್ವಾಮಿಯವರು ಹೇಳಿದರು.



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್, ಜಲಜೀವನ್ ಮಿಷನ್ ಮತ್ತು ಸ್ವಚ್ಛಭಾರತ್ ಮಿಷನ್ ವತಿಯಿಂದ ಇಂದು(ಏ. 😎 ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷವಾಕ್ಯ: Accelerate Action ವೇಗವರ್ಧನೆಗಾಗಿ ಕ್ರಮಕೈಗೊಳ್ಳೋಣ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಗ್ರಾಮೀಣ ಪದ್ದತಿಯನ್ನು ಒಳಗೊಂಡಂತಹ ಹಾಗೂ ಆಧುನಿಕ ಸ್ಪರ್ಧೆಗಳನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಜಿಲ್ಲೆಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.



ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳೆಯರು ವಾರಕ್ಕೊಮ್ಮೆ ಗುಂಪು ಸೇರಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆಯನ್ನು ನಡೆಸಿ ಅದರ ಬಗ್ಗೆ ಅರಿವು ಮೂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾವು ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಶೇ 100 ರಷ್ಟು ಪಡೆದುಕೊಳ್ಳಿ ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.



ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿಕರಿಗೆ ನೀಡಿರುವ ಹಲವಾರು ಯೋಜನೆಗಳ ಸದ್ಭಳಕೆಯನ್ನು ಪಡೆದುಕೊಳ್ಳಿ. ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್, ಮುದ್ರಾ ಯೋಜನೆ, ನರೇಗಾ ಯೋಜನೆಗಳನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ ಎಂದರು.



ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ಹಾಗೂ ಕಷ್ಟದ ಸಂದರ್ಭದಲ್ಲಿ ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳು ಮತ್ತು ಮೈಕ್ರೋ ಫೈನಾನ್ಸ್ ಗಳಂತ ಸಂಸ್ಥೆಗಳಲ್ಲಿ ಸಾಲ ಪಡೆಯಬೇಕಾಗುತ್ತದೆ. ಅದರೆ ಸಾಲ ಪಡೆಯುವಾಗ ಮತ್ತು ವ್ಯವಹಾರಿಸುವಾಗ ಎಚ್ಚರಿಕೆಯಿಂದಿರಬೇಕು‌. ಎಂದು ತಿಳುವಳಿಕೆಯನ್ನು ಹೇಳಿದರು.



ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.



ಕಾರ್ಯಕ್ರಮದಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್,ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ