Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

*ಆರೋಗ್ಯ ಧಾಮವನ್ನು ಸಮರ್ಪಕವಾಗಿ ನಿರ್ವಹಿಸಿ: ಡಾ. ಕುಮಾರ*





ರೋಗಿಗಳ ಆರೈಕೆಗಾಗಿ ಬರುವ ಆರೈಕೆದಾರರು ತಂಗಲು ಸಿ.ಎಸ್.ಆರ್ ಅನುದಾನ ಬಳಸಿ ಮಿಮ್ಸ್ ಆವರಣದಲ್ಲಿ ನಿರ್ಮಿಸಲಾಗಿರುವ ಆರೋಗ್ಯ ಧಾಮವನ್ನು ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.



ಇಂದು (ಜೂ.16) ರಂದು ಮಿಮ್ಸ್ ವೈದ್ಯಕೀಯ ಕಾಲೇಜಿನ ನಿರ್ದೇಶಕರ ಕಚೇರಿಯನ್ನು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಆರೋಗ್ಯ ಧಾಮದ ಹೊಣೆಗಾರಿಕೆಯನ್ನು ನಿಭಾಯಿಸಲು ನೋಡೆಲ್ ಅಧಿಕಾರಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಪಿ. ಕೃಷ್ಣಕುಮಾರ್, ಉಸ್ತುವಾರಿ ಹಾಗೂ ಮೇಲ್ವಿಚರಣೆಗೆ ಮಿಮ್ಸ್ ಆಸ್ಪತ್ರೆಯ ಸ್ಥಾನಿಯ ವೈದ್ಯಾಧಿಕಾರಿ ಡಾ. ದರ್ಶನ್ ಕುಮಾರ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

*ಆರೋಗ್ಯ ಧಾಮಕ್ಕೆ ರೂ 30 ಶುಲ್ಕ*

ಆರೋಗ್ಯ ಧಾಮದ ಸೌಲಭ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ದಾಖಲಾತಿ ವಿಭಾಗಗಳಲ್ಲಿ ಫಲಕಗಳನ್ನು ಅಳವಡಿಸಿ. ಆಸ್ಪತ್ರೆಗೆ ದಾಖಲಾದ ರೋಗಿಗಳ ಪರವಾಗಿ ಬರುವ ಆರೈಕೆದಾರರು "ಆರೋಗ್ಯ ಧಾಮದಲ್ಲಿ ತಂಗಲು ಇಚ್ಚೆಪಟ್ಟಲ್ಲಿ ದಿನಕ್ಕೆ (24 ಗಂಟೆಗಳು) ರೂ.30 ಶುಲ್ಕವನ್ನು ಪಾವತಿಸಿಕೊಂಡು ರಶೀದಿ ನೀಡಬೇಕು ಎಂದು ತಿಳಿಸಿದರು.



ವಿಧಿಸಲಾಗುವ ರೂ.30 ಶುಲ್ಕವನ್ನು ಬಳಕೆದಾರರ ನಿಧಿಗೆ ಜಮೆ ಮಾಡಬೇಕು ಮತ್ತು ಈ ಮೊತ್ತದಿಂದಲೇ ಆರೋಗ್ಯಧಾಮದ ನಿರ್ವಹಣೆ ಆರೋಗ್ಯಧಾಮಕ್ಕೆ ನೇಮಿಸಿಕೊಳ್ಳಲಾಗಿರುವ ಸಿಬ್ಬಂದಿಗಳು ವೇತನ ಪಾವತಿಗೆ ವೆಚ್ಚ ಮಾಡಬೇಕು.ರೋಗಿಯು ಆಸ್ಪತ್ರೆಯಲ್ಲಿ ದಾಖಲಾದ ನಂತರ ನೀಡಲಾಗುವ ದಾಖಲಾತಿ ಸಂಖ್ಯೆಯ ಆಧಾರದ ಮೇಲೆ ಅವರ ಆರೈಕೆದಾರರಿಗೆ ಕಂಪ್ಯೂಟರ್ ಆಧಾರಿತ ಪಾವತಿ ಚೀಟಿಯನ್ನು ನೀಡಬೇಕು ಎಂದು ತಾಕೀತು ಮಾಡಿದರು.



ಆರೈಕೆದಾರರು ರೋಗಿಯ ದಾಖಲಾತಿ ವಿವರ, ಆರೋಗ್ಯಧಾಮಕ್ಕೆ ದಾಖಲಾದ ಆರೈಕೆದಾರರ ದಾಖಲಾತಿ ಚೀಟಿ, ಆರೈಕೆದಾರರ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ನೀಡಿ ಆರೋಗ್ಯಧಾಮದಲ್ಲಿ ದಾಖಲಾಗಬೇಕು. ಆರೋಗ್ಯಧಾಮದಲ್ಲಿ ಸ್ವಚ್ಛತೆ ಕಾಪಾಡಬೇಕು, ಅಧಿಕಾರಿಗಳು ಆರೈಕೆದಾರರು ಆರೋಗ್ಯಧಾಮದಲ್ಲಿ ಅನುಸರಿಸಬೇಕಾದ ನಿಯಮಗಳ ಫಲಕವನ್ನು ಅಳವಡಿಸಿ, ನಿಯಮ ಉಲ್ಲಂಘಿಸಿದವರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದರು.



ಆರೋಗ್ಯಧಾಮದ ವಿವರಗಳು ಮತ್ತು ದಾಖಲಾದವರ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಆರೋಗ್ಯಧಾಮದಲ್ಲಿ ಸಿಸಿಟಿವಿ ಕಣ್ಗಾವಲನ್ನು ಏರ್ಪಡಿಸಲಾಗಿದೆ. ಪ್ರತಿನಿತ್ಯವೂ ಆರೋಗ್ಯ ಧಾಮವನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡುವುದು ಅಧಿಕಾರಿಗಳ ಜವಾಬ್ದಾರಿ, ಸಾಧ್ಯವಾದಷ್ಟು ಶೀಘ್ರವಾಗಿ ಆರೋಗ್ಯ ಧಾಮದ ದಾಖಲಾತಿ ಪ್ರಾರಂಭಿಸಿ ‌ಸಾರ್ವಜನಿಕರಿಗೆ ಅನುವು ಮಾಡಿ ಎಂದು ತಿಳಿಸಿದರು.

ಉಪಲೋಕಾಯುಕ್ತರು ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ನ್ಯೂನತೆಗಳನ್ನು ತಿಳಿಸಿದ್ದು, ಅವುಗಳನ್ನು ಸರಿಪಡಿಸಿಕೊಂಡು ವರದಿ ನೀಡುವಂತೆ ಈಗಾಗಲೇ ತಿಳಿಸಲಾಗಿತ್ತು. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಪರಿಶೀಲಿಸಲು ಆಗಿಂದಾಗ ಭೇಟಿ ನೀಡಿ ಪರಿಶೀಲಿಸುವಂತೆ ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ: ಶಿವಕುಮಾರ್ ಅವರಿಗೆ ತಿಳಿಸಿದರು.



ಮಿಮ್ಸ್ ನಿರ್ದೇಶಕ ಡಾ: ನರಸಿಂಹಸ್ವಾಮಿ ಅವರು ಮಾತನಾಡಿ ಹೊರ ರೋಗಿ ವಿಭಾಗದಲ್ಲಿ ವಿಕಲಚೇತನರಿಗೆ, ಪುರುಷರಿಗೆ, ಮಹಿಳೆಯರಿಗೆ, ಹಿರಿಯ ನಾಗರೀಕರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸ್ವಚ್ಛತಾ ಕೆಲಸಗಳನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತಿದೆ. ಶುದ್ಧ ಕುಡಿಯುವ ನೀರಿನ ಆರ್.ಓ ಅಳವಡಿಕೆಯ ಕೆಲಸ ಪ್ರಗತಿಯಲ್ಲಿದೆ ಎಂದರು.



ಸಭೆಯ ನಂತರ ಜಿಲ್ಲಾಧಿಕಾರಿಗಳು ಓ.ಪಿ.ಡಿ ಹಾಗೂ ಔಷಧಿ ವಿತರಣಾ ಘಟಕಕ್ಕೆ ಭೇಟಿ ನೀಡಿ ನೀಡಿ ಪರಿಶೀಲನೆ ನಡೆಸಿದರು. ನಂತರ ವಾಹನ ನಿಲುಗಡೆ ಸ್ಥಳಕ್ಕೆ ಭೇಟಿ ನೀಡಿ ಶುಲ್ಕ ಪಡೆಯುತ್ತಿರುವ ಬಗ್ಗೆ ವಿಚಾರಣೆ ನಡೆಸಿದರು. ಎಂಟು ಗಂಟೆಯ ಅವಧಿಗೆ ರೂ 7/- ನಿಗದಿಯಾಗಿದ್ದು, ರೂ 10/- ಚೀಟಿಗಳು ಲಭ್ಯವಿದ್ದು, ಕಂಪ್ಯೂಟರ್ ಆಧಾರಿತ ಬಿಲ್ ನೀಡಿ ಸರಿಯಾಗಿ ನಿರ್ವಹಿಸದಿದ್ದಲ್ಲಿ ಟೆಂಡರ್ ರದ್ದು ಪಡಿಸುವುದಾಗಿ ಎಚ್ಚರಿಕೆ ನೀಡಿದರು.



ಸಭೆಯಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಯಪ್ರಕಾಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ