ಬಜೆಟ್‌ನಲ್ಲಿ 150 ವಿದ್ಯಾರ್ಥಿಗಳ ಸಾಮರ್ಥ್ಯದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲಾಗುವುದು. ಜೊತೆಗೆ ಈಗ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ ಹೆಚ್ಚುವರಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.
ಸಂತ ಶಿಶುನಾಳ ಶರೀಫರವರ ಹೆಸರಿನಲ್ಲಿ CBSE ಪಠ್ಯಕ್ರಮದಡಿ 10 ಹೊಸ ವಸತಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ ಮೀಸಲಿರಿಸಲಾಗಿದೆ.
ಇದಲ್ಲದೆ, 100 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ರೂ.400 ಕೋಟಿ ವೆಚ್ಚದಲ್ಲಿ ಕೆ.ಪಿ.ಎಸ್. ಮಾದರಿ ಶಾಲೆಗಳಾಗಿ ಉನ್ನತೀಕರಿಸಲಾಗುತ್ತದೆ.
ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ರೂ.100 ಕೋಟಿ ಅನುದಾನ ನೀಡಲಾಗುತ್ತಿದ್ದು, ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ಮಾಸಿಕ ರೂ.6,000 ಗೌರವಧನ ನೀಡಲು ಕ್ರಮ ಕೈಗೊಳ್ಳಲಾಗಿದೆ.
Also read