Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಯುವ ಸೌರಭ” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೇಯರ್ ಮುಲ್ಲಂಗಿ ನಂದೀಶ್ ಕರೆ ವಿದ್ಯಾರ್ಥಿಗಳು ಕಲಾಸಕ್ತಿ ಬೆಳೆಸಿಕೊಳ್ಳಿ





ಬಳ್ಳಾರಿ,ಜು.11

ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳು ಕಲಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವಿಶ್ರೀಕೃ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ “ಯುವ ಸೌರಭ” ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಲೆಯನ್ನು ಆಸ್ವಾದಿಸುವ ಮನಸ್ಥಿತಿ ಬಹಳ ಮುಖ್ಯ. ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸಕ್ಕೆ ಸೀಮಿತವಾಗಿರಬಾರದು. ತಮ್ಮಲ್ಲಿನ ಕಲಾ ಪ್ರತಿಭೆಗಳನ್ನು ಹೊರಹಾಕಬೇಕು. ಸಾಂಸ್ಕೃತಿಕವಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಶಿಕ್ಷಣ ಎಂದರೆ ಕೇವಲ ವಿದ್ಯಾಭಾಸವಲ್ಲ, ಬದಲಾಗಿ ವಿದ್ಯಾರ್ಥಿಗಳು ಕಲೆ, ಕವನ, ಕವಿತೆ, ಸಾಹಿತ್ಯ ಬರವಣಿಗೆ, ವಿದ್ಯೆ-ವಿನಯ ಅಳವಡಿಸಿಕೊಂಡರೆ ದೇಶದ ಸಂಸ್ಕೃತಿ ಸಮೃದ್ಧಿಗೆ ಬೆಳಕಾಗುತ್ತದೆ ಎಂದರು.

ಯುವಕರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಯುವಕರಲ್ಲಿನ ಕಲೆಯನ್ನು ಪ್ರೋತ್ಸಾಹಿಸುವುದಕ್ಕಾಗಿಯೇ ‘ಯುವ ಸೌರಭ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ವೇದಿಕೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ವಿವಿಯ ಕುಲಪತಿಯವರೊಂದಿಗೆ ಚರ್ಚಿಸಲಾಗಿದೆ ಎಂದರು.

ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಒತ್ತಡ ಜೀವನದಲ್ಲಿ ಕಲೆಯು ನೆಮ್ಮದಿಯ ಪಾಠ ಕಲಿಸುತ್ತದೆ. ಕಲಾಭ್ಯಾಸಕ್ಕೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ನಾಟಕ ವಿಭಾಗವಿದ್ದು, ವಿದ್ಯಾರ್ಥಿಗಳಿಗೆ ಕಲಾ ಶಿಕ್ಷಣ ಬೋಧನೆ ಮಾಡುವ ಕೆಲಸವಾಗುತ್ತಿದೆ ಎಂದರು.

ವಿವಿಯಲ್ಲಿ ಸುಸಜ್ಜಿತ ಆಡಿಟೋರಿಯಂ ಹಾಲ್ ನಿರ್ಮಾಣ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು. ಗುಣಮಟ್ಟದ ಕಟ್ಟಡ ನಿರ್ಮಾಣಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು:

ಬಳಿಕ ಕಾರ್ಯಕ್ರಮದಲ್ಲಿ ಕಂಪ್ಲಿ ಎಮ್ಮಿಗನೂರಿನ ಜ್ಞಾನೇಶ್ವರ ತಂಡದಿAದ ಸುಗಮ ಸಂಗೀತ, ಬಳ್ಳಾರಿಯ ನಟರಾಜ ಕುಚುಪುಡಿ ನೃತ್ಯ-ಸಂಗೀತ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ, ಸಂಡೂರು ತಾಲ್ಲೂಕಿನ ವಿ.ನಾಗಲಾಪುರದ ಶರಣಬಸವ.ಹೆಚ್ ಅವರ ಜಾನಪದ ಗೀತೆ, ಸಿರಿಗೇರಿಯ ಎನ್.ಮಣಿಕಂಠ ಸಂಗಡಿಗರಿAದ ಬಯಲಾಟ(ಭಾರ್ಗವ ರಾಮ), ಬಳ್ಳಾರಿಯ ಎಂ.ಎಸ್.ಹರ್ಷ ತಂಡದಿAದ ತಾಷರಂಡೋಲ್, ಸಂಡೂರು ತಾಲ್ಲೂಕಿನ ಎಂ.ಬಸಾಪುರದ ಆರ್.ನಾಗರಾಜ ತಂಡದಿ0ದ ಡೊಳ್ಳು ಕುಣಿತ ಸೇರಿದಂತೆ ಇತರೆ ವೈವಿಧಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ಕರ್ನಾಟಕ ಬಂಜಾರ ಸಂಸ್ಕೃತಿ ಅಕಾಡೆಮಿಯ ಸದಸ್ಯ ಪ್ರೊ.ಶಾಂತನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಯ ವಿವಿಧ ವಿಭಾಗಗಳ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ