Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ನವೆಂಬರ್ 25 ರಂದು ಮೆಗಾ ಜಾಬ್ ಮೇಳ

ಬಳ್ಳಾರಿ, ನ. 21:
ವೈ.ಎಂ. ಸತೀಶ್ ಫೌಂಡೇಶನ್, ವೀರಶೈವ ವಿದ್ಯಾವರ್ಧಕ ಸಂಘ, ಇನ್ಫೋಸಿಸ್ ಫೌಂಡೇಶನ್ ಮತ್ತು ನಿರ್ಮಾಣ್ ಸಂಸ್ಥೆಗಳು ಜಂಟಿಯಾಗಿ ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ನವೆಂಬರ್ 25ರ ಮಂಗಳವಾರ ಮೆಗಾ ಜಾಬ್ ಮೇಳವನ್ನು ಏರ್ಪಡಿಸಿವೆ.

ವೈ.ಎಂ. ಸತೀಶ್ ಫೌಂಡೇಶನ್ ಸಂಸ್ಥಾಪಕ ಟ್ರಸ್ಟಿ ಆಗಿರುವ ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ನವೆಂಬರ್ 25ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನೇರ ವಾಕಿನ್ ಸಂದರ್ಶನಗಳು ನಡೆಯಲಿವೆ. ಆಸಕ್ತರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದ್ದಾರೆ.

ಮೆಗಾ ಜಾಬ್ ಮೇಳದಲ್ಲಿ ಐಟಿಐ, ಡಿಪ್ಲೊಮಾ, ಬಿಎಸ್ಸಿ, ಡಿ ಫಾರ್ಮಾ, ಯಾವುದೇ ಪದವಿ ಮತ್ತು ಸ್ನಾತ್ತಕೋತ್ತರ ಪದವಿ, ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದವರು ಜಾಬ್ ಮೇಳದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶಗಳಿವೆ. ಪ್ರವೇಶ ಉಚಿತವಾಗಿದೆ ಎಂದು ತಿಳಿಸಿದ್ದಾರೆ.

ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಬಯೋಡಾಟದ 10 ಪ್ರತಿಗಳನ್ನು, ಭಾವಚಿತ್ರಗಳನ್ನು, ಆಧಾರ್ ಕಾರ್ಡ್,  ಮತ್ತು ಅಂಕಪಟ್ಟಿ, ವಿದ್ಯಾರ್ಹತೆಯ ನಕಲು ಪ್ರತಿಗಳನ್ನು ತರಬೇಕು. ಬಳ್ಳಾರಿ, ಬೆಂಗಳೂರು ಮತ್ತು ಹೈದರಾಬಾದ್‍ನಲ್ಲಿ ಉದ್ಯೋಗ ಮಾಡಲು ಆಸಕ್ತರಾಗಿರಬೇಕು.

ವಿವರಗಳಿಗಾಗಿ : ಮೊಬೈಲ್ ಸಂಖ್ಯೆ : 9886367517, 7090953830, 9154955835 ಗೆ ಸಂಪರ್ಕ ಮಾಡಿರಿ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ