Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೈಬರ್ ಅಪರಾಧ ತಡೆಗೆ ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ:ಸಚಿವ ಪರಮೇಶ್ವರ

ಧಾರವಾಡ ) ಅಕ್ಟೋಬರ್ 05; ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು.

ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಯಾವುದೇ ಸೈಬರ್ ಅಪರಾಧವಾದರೆ ಹೊಸ ಕಾನೂನುಗಳನ್ವಯ ತನಿಖೆ ನಡೆಸಬೇಕಾಗುತ್ತದೆ ಎಂದರು.

ಪ್ರತಿ ಜಿಲ್ಲೆಗೊಂದರಂತೆ ರಾಜ್ಯದಲ್ಲಿ ಒಟ್ಟು 43 ಸೆನ್ ಪೊಲೀಸ್ ಠಾಣೆಗಳಿದ್ದು, ಸದ್ಯ ಡಿವೈಎಸ್ಪಿ ಅಧಿಕಾರಿಗಳು ಇರುತ್ತಾರೆ. ಮುಂದಿನ ದಿನಗಳಲ್ಲಿ ಎಸ್.ಪಿ ರ್ಯಾಂಕ್ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ತಿಳಿಸಿದರು. ಸೆನ್ ಠಾಣೆಯ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ವಿಶೇಷ ರೀತಿಯ ತರಬೇತಿಗಳನ್ನು ರೂಪಿಸಲಾಗುವುದು. ಈ ಹಿನ್ನಲೆಯಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ರಾಜ್ಯದ ಪೊಲೀಸ್ ಇಲಾಖೆಗೆ ಹೆಚ್ಚು ಉಪಯೋಗವಾಗಲಿದೆ ಎಂದರು.

ದಿನೇ ದಿನೇ ಅಪರಾಧಗಳ ರೂಪರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ ನೀಡಲಾಗುವುದೆಂದು ಸಚಿವರು ತಿಳಿಸಿದರು.

ಸೈಬರ್ ಕ್ರೈಂಗಳಿಗೆ ಯಾವುದೇ ಅಡೆತಡೆ ಇಲ್ಲದೇ ವಿಶ್ವವ್ಯಾಪಿಯಾಗಿವೆ. ಗುಜರಾತನಲ್ಲಿ ಸೈಬರ್ ವಿಶ್ವ ವಿದ್ಯಾಲಯ ನಿರ್ಮಿಸಲಾಗಿದ್ದು ವಿವಿಧ ದೇಶಗಳಿಂದ ಬಂದು ತರಬೇತಿ ಪಡೆಯುತ್ತಿದ್ದಾರೆ. ಇದರ ಭಾಗವಾಗಿ ಧಾರವಾಡದಲ್ಲಿ ವಿಧಿ ವಿಜ್ಞಾನ ಸಂಸ್ಥೆ ಸ್ಥಾಪಿಸಲಾಗಿದ್ದು ರಾಜ್ಯದ ಪೊಲೀಸ್ ಇಲಾಖೆಗೆ ಆಧುನಿಕ ವಿಧಿ ವಿಜ್ಞಾನವು ಅತೀ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆಯೆಂದರು.

ಡ್ರಗ್ಸ ವಿರುದ್ಧ ಸಮರ: ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು.

ನಂತರ ವಿಧಿ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಈ ವಿದ್ಯಾರ್ಥಿಗಳಿಗೆ ಬರುವ ದಿನಮಾನಗಳಲ್ಲಿ ವಿಫುಲ ಅವಕಾಶಗಳಿವೆ ಸೈಬರ್ ಫಾರೆನ್ಸಿಕ್‍ಗಳು, ಸೈಬರ್ ಕಮಾಂಡೋಗಳು, ಸೈವರ್ ಎಕ್ಸಪರ್ಟಗಳು ತಯಾರಿ ಮಾಡುವಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ತಂತ್ರಜ್ಞಾನಕ್ಕನುಗುಣವಾಗಿ ಅಪರಾಧ ಹಾಗೂ ಅಪರಾಧಿಗಳ ಚಟುವಟಿಕೆಗಳನ್ನು ಮೊದಲೇ ವಿಶ್ಲೇಷಿಸಲು ಸರಿಯಾದ ಉಪಕರಣಗಳ ಜೊತೆ ಪರಿಣಿತರು ಸಹ ಇರಲೇಬೇಕು. ಭಾರತೀಯ 3 ಹೊಸ ಕಾನೂನುಗಳ ಬೇಡಿಕೆಗೆ ಅನುಗುಣವಾಗಿ ಪ್ರಕರಣಗಳನ್ನು ತನಿಖೆ ಮಾಡುವಲ್ಲಿ ಅನುಕೂಲವಾಗುತ್ತದೆ. ಸೈಬರ್ ಪರಿಣಿತರರು ನೀಡುವ ವರದಿ ಹಾಗೂ ದಾಖಲೆಗಳು ಹೊಸ ಕಾನೂನಿನಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಡಿಜಿಟಲ್ ವಿಧಿ ವಿಜ್ಞಾನ, ಜೌಷಧಿ ವಿಧಿ ವಿಜ್ಞಾನ, ಬಯೋಕೆಮಿಸ್ಟ್ರಿ ವಿಧಿ ವಿಜ್ಞಾನ, ಸೈಬರ್ ಸೆಕ್ಯೂರಿಟಿ ಹಾಗೂ ಪರಿಸರ ವಿಧಿ ವಿಜ್ಞಾನಗಳನ್ನು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಘಾಟೆ ತಿಳಿಸಿದರು.

ಪ್ರಯೋಗಾಲಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಚಿವರು ವೀಕ್ಷಿಸಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಬೆಳಗಾವಿ ವಿಭಾಗದ ಐಜಿಪಿ ವಿಕಾಸಕುಮಾರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು