Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಪ್ಪುತಲೆ ಹುಳುವಿನ ಸಮೀಕ್ಷೆ ಜನವರಿಯಿಂದ ಪುನಾರಂಭ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಭರವಸೆ





*ಬೆಳಗಾವಿ ಸುವರ್ಣಸೌಧ ಡಿ.09 :* ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಬೇಗನೇ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರು ಭರವಸೆ ನೀಡಿದರು.



ಪರಿಷತ್ತಿನಲ್ಲಿ ಡಿ.09ರಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 30 (235)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಕಪ್ಪುತಲೆಹುಳು ಬಾಧಿತ ತೆಂಗಿನ ಬೆಳೆಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ-2025ರ ಮಾಹೆಯ ಅವಧಿಯಲ್ಲಿಯೇ ಪೂರ್ಣಗೊಳಿಸಬೇಕಿತ್ತು. ಆದರೆ, ಮಳೆ ಹಾಗೂ ಇನ್ನಿತರ ಕಾರಣದಿಂದ ಸಮೀಕ್ಷೆ ಅಪೂರ್ಣವಾಗಿದೆ.



ಸಮೀಕ್ಷೆ ಕೈಗೊಳ್ಳಲು ಅನುದಾನದ ಅವಶ್ಯಕತೆ ಇರುವುದರಿಂದ ಸಮೀಕ್ಷೆಗೆ ಅಂದಾಜು 1.94 ಕೋಟಿ ರೂ ಬೇಕಿದೆ ಎಂದು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಿದ್ದೇವೆ.



ಜನವರಿಯಿಂದ ಮೇ ವರೆಗೂ ಹೆಚ್ಚಿನ ಉಷ್ಣಾಂಶದಿAದ ಕಪ್ಪುತಲೆ ಹಾಗೂ ಬಿಳಿನೊಣದ ಹಾನಿ ಹೆಚ್ಚಾಗಲಿದ್ದು, ಈ ಅವಧಿಯಲ್ಲಿ ಸಮೀಕ್ಷೆ ಕೈಗೊಂಡಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ.



ಸಮೀಕ್ಷೆಗೆ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಪ್ರತಿ ತಾಕಿಗೆ ರೂ. 10 ರಂತೆ ಗೌರವಧನ ನೀಡಲಾಗುತ್ತದೆ. ಒಟ್ಟು ಕಪ್ಪುತಲೆ ಹುಳುವಿನಿಂದ 62,044 ಹೆಕ್ಟೇರ್ ಪ್ರದೇಶವನ್ನು ಹಾಗೂ ಬಿಳಿನೊಣದಿಂದ 3,24,259 ಹೆಕ್ಟೇರ್ ಪ್ರದೇಶ ಬಾಧಿತವಾಗಿರುವುದಾಗಿ ಅಂದಾಜಿಸಲಾಗಿದೆ.



ಬಿಳಿನೊಣದ ಬಾಧೆ ಹೆಚ್ಚಾದ ಬಗ್ಗೆ ಮುಖ್ಯಮಂತ್ರಿಗಳು ಸೂಚಿಸಿದಂತೆ ಹಾಗೂ ಸಂಬ0ಧಪಟ್ಟ ಸ್ಥಳೀಯ ಜನಪ್ರತಿನಿಧಿಗಳ ಕೋರಿಕೆಯಂತೆ ಕಪ್ಪುತಲೆ ಹುಳುವಿನ ಜೊತೆಗೆ ಬಿಳಿನೊಣದ ಸಮೀಕ್ಷೆಯನ್ನು ಸಹ ಕೈಗೊಳ್ಳಬೇಕಾಗಿದೆ ಎಂದು ಸಚಿವರು ವಿವರಿಸಿದರು.



ಮೈಸೂರು, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ದಕ್ಷಿಣ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕಪ್ಪುತಲೆ ಹುಳುವಿನ ಬಾಧೆ ಕಾಣಿಸಿಕೊಂಡು ತೆಂಗಿನ ಇಳುವರಿ ಕುಸಿದಿದೆ. ಸಮೀಕ್ಷೆ ಪೂರ್ಣವಾಗುವವರೆಗೆ ಏನಾದರು ಪರಿಹಾರ ಕಲ್ಪಿಸಬೇಕು ಎಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರು ಸರ್ಕಾರಕ್ಕೆ ಒತ್ತಾಯ ಮಾಡಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ