Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮುಂಗಾರು ಹಂಗಾಮು ಪ್ರಾರಂಭ; ರೈತರು ಮಾಗಿ ಉಳುಮೆ ಅನುಸರಿಸಿ





ಬಳ್ಳಾರಿ,ಮೇ 12:

ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವುದರಿOದ ರೈತರು ತಮ್ಮ ಜಮೀನಿನಲ್ಲಿ ಮಾಗಿ ಉಳುಮೆ ಮಾಡಿಕೊಂಡು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ, ಎರೆಹುಳ ಗೊಬ್ಬರ ಮತ್ತು ಸಾವಯವ ಗೊಬ್ಬರಗಳನ್ನು ತಮ್ಮ ಜಮೀನುಗಳಿಗೆ ಸೇರಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ಮಾಗಿ ಉಳುಮೆ ಎಂದರೆ ಎಂ.ಬಿ.ನೇಗಿಲು, ಡಿಸ್ಕ್ ಪ್ಲೋ ಅಂತಹ ಯಂತ್ರೋಪಕರಣಗಳನ್ನು ಬಳಸಿ, ಇಳಿಜಾರಿನ ಅಡ್ಡಕ್ಕೆ ಹೊಲವನ್ನು ಆಳವಾದ ಉಳುಮೆ, ಮಣ್ಣಿನ ಹೊರಪದರವನ್ನು ತೆರೆದು ಸೂರ್ಯನ ಕಿರಣಗಳಿಂದ ಸೋಂಕುರಹಿತಗೊಳಿಸಲು ಕೆಳಗಿನ ಮಣ್ಣನ್ನು ತಿರುಗಿಸುವುದಾಗಿದೆ ಎಂದು ಅವರು ತಿಳಿಸಿದ್ದಾರೆ.

*ಮಾಗಿ ಉಳುಮೆಯಿಂದಾಗುವ ಪ್ರಯೋಜನಗಳು:*

ಮಾಗಿ ಉಳುಮೆಯಿಂದ ಮಣ್ಣಿನ ಗಟ್ಟಿಯಾದ ಹೊರಪದರವನ್ನು ಒಡೆದು ಆಳವಾದ ಉಳುಮೆ ಮಾಡುವುದರಿಂದ ನೀರಿನ ಇಂಗುವ ಸಾಮರ್ಥ್ಯ ಹೆಚ್ಚಾಗುತ್ತದೆ. ಮಣ್ಣು ಹೆಚ್ಚಿನ ನೀರನ್ನು ಹಿಡಿದುಕೊಂಡು ಸುಲಭವಾಗಿ ಗಿಡಗಳಿಗೆ ದೊರೆಯುವಂತೆ ಮಾಡುತ್ತದೆ.

ಮಾಗಿ ಉಳುಮೆಯಲ್ಲಿ ಪರ್ಯಾಯ ಬಿಸಿಲಿನಿಂದ ಒಣಗಿಸುವಿಕೆ ಹಾಗೂ ಗಾಳಿಯಿಂದ ತಂಪಾಗಿಸುವಿಕೆಯಿOದಾಗಿ ಮಣ್ಣಿನ ರಚನೆಯು ಸುಧಾರಿಸುತ್ತದೆ. ಮಣ್ಣಿನ ಗಾಳಿಯನ್ನು ಸುಧಾರಿಸುವುದರಿಂದ ಸೂಕ್ಷö್ಮಜೀವಿಗಳ ಉತ್ಪತ್ತಿಯು ಹೆಚ್ಚಾಗಿ ಸಾವಯವ ಗೊಬ್ಬರಗಳು ಕರಗಿ ಪೋಷಕಾಂಶಗಳ ಲಭ್ಯತೆಯು ಹೆಚ್ಚುತ್ತದೆ ಎಂದಿದ್ದಾರೆ.

ಮಳೆಯನ್ನು ಹೀರಿಕೊಳ್ಳುವ ಮಣ್ಣಿನ ಸಾಮರ್ಥ್ಯವು ಬೆಳೆದಂತೆ ವಾತಾವರಣದಲ್ಲಿ ಲಭ್ಯವಿರುವ ಸಾರಜನಕ ನೀರಿನಲ್ಲಿ ಕರಗಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಣ್ಣಿನಡಿಯಲ್ಲಿ ಅಡಗಿರುವ ಅನೇಕ ಕೀಟಗಳ ಮೊಟ್ಟೆ, ಮರಿಹುಳು ಮತ್ತು ಕೋಶಗಳು ಸೂರ್ಯನ ಅತಿಯಾದ ಬಿಸಿಲಿನ ಶಾಖದಿಂದ ಸತ್ತುಹೊಗಿ ಮುಂದಿನ ಬೆಳೆಗಳ ಮೇಲೆ ಕೀಟಗಳ ಅಪಾಯದ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಸಿಲಿನ ಶಾಖಕ್ಕೆ ಅನೇಕ ಬ್ಯಾಕ್ಟೀರಿಯಾ ಬೀಜಕಗಳು, ಶಿಲೀಂದ್ರಗಳು ಮತ್ತು ಸೂಕ್ಷö್ಮಜೀವಿಗಳು ಸಾಯುತ್ತವೆ, ಇದರಿಂದ ಮುಂದಿನ ಬೆಳೆಗಳಿಗೆ ಉಂಟಾಗುವ ರೋಗಗಳನ್ನು ತಪ್ಪಿಸಿ ಕೀಟ ಮತ್ತು ರೋಗನಾಶಕಗಳಿಗೆ ತಗಲುವ ವೆಚ್ಚವನ್ನು ಉಳಿಸುತ್ತದೆ. ಮಾಗಿ ಉಳಿಮೆಯಿಂದ ನೆಮಟೋಡ್ ಬಾಧೆಯನ್ನು ತಪ್ಪಿಸಬಹುದು. ಮಾಗಿ ಉಳುಮೆಯು ಕಳೆಗಳು ಮೊಳಕೆಯೊಡೆಯುವುದನ್ನು ತಡೆಯುತ್ತದೆ ಇದರಿಂದ ಕಳೆಗಳ ನಿಯಂತ್ರಣವನ್ನು ಮಾಡಬಹುದು.

ಮಾಗಿ ಉಳುಮೆಯಿಂದ ಹೆಚ್ಚಿನ ಮಳೆ ನೀರು ಸಂಗ್ರಹಣೆ, ಪೋಷಕಾಂಶಗಳ ಸಮತೋಲನ ಮತ್ತು ಮಣ್ಣಿನ ಗುಣಧರ್ಮಗಳ ಸುಧಾರಣೆಯಿಂದ ಹೆಚ್ಚಿನ ಬೆಳೆ ಇಳುವರಿ ಪಡೆಯಲು ಸಾಧ್ಯವಾಗುತ್ತದೆ.

ಹಾಗಾಗಿ ರೈತ ಬಾಂಧವರು ಮಾಗಿ ಉಳುಮೆಯ ಈ ಎಲ್ಲಾ ಪ್ರಯೋಜನೆಗಳಿಂದ ಕಡಿಮೆ ಖರ್ಚು ಮಾಡಿ ಹೆಚ್ಚಿನ ಇಳುವರಿ ಪಡೆದುಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ