Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದ ಗೋವಿಂದ ಎಂ ಕಾರಜೋಳ ಹೇಳಿಕೆ ಭರಮಸಾಗರ-ಚಿತ್ರದುರ್ಗ ರೈಲ್ವೇ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ


ಚಿತ್ರದುರ್ಗ .ಜುಲೈ.11: ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.



ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.

ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲುಮಾರ್ಗ ಕೇಂದ್ರಕ್ಕೆ ಪ್ರಸ್ತಾವ:

ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳು ಇದ್ದಾಗ ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಕೊಡಲಾಗಿತ್ತು. 50:50 ಮಾದರಿಯಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವುದರೊಂದಿಗೆ, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂಮಿ ಹಸ್ತಾಂತರ ಮಾಡುವುದಾಗಿ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಈ ಯೋಜನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚಿತ್ರದುರ್ಗ ಜಿಲ್ಲಾಧಿಕಾರಿಗಳು ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಈ ಹಿಂದೆ ಸಲ್ಲಿಸಿದ್ದ ಯೋಜನೆ ಪ್ರಸ್ತಾವನೆ ಪ್ರತಿ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂಸ್ವಾಧೀನಾಧಿಕಾರಿ ವಿವೇಕ್, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಪರದೀಪ್ ಪುರಿ, ಕಾರ್ಯಪಾಲಕ ಇಂಜಿನಿಯರ್ ರಜತ್ ತುನಹಾ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬಿ.ಪುರುಷೊತಮ್, ವಿಭಾಗೀಯ ಸಹಾಯಕ ಇಂಜಿನಿಯರ್ ನಿತ್ಯಾನಂತದ ಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು