ವಿಜಯನಗರ (ಹೊಸಪೇಟೆ)ಜ.31:
ಜನವರಿ 25 ರಿಂದ ಫೆಬ್ರವರಿ 5ರವರೆಗೆ ನಡೆಯಲಿರುವ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವ ಜಾತ್ರೆ ನಡೆಯಲಿದೆ. ಜಾತ್ರೆಯ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸುಗಮವಾಗಿ ನಡೆಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಯಿಂದ ಫೆಬ್ರವರಿ 1 ರಿಂದ 6ರ ವರೆಗೆ ಮೈಲಾರ, ಹೊಳಲು ಗ್ರಾಮಗಳನ್ನೊಳಗೊಂಡಂತೆ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಹಾಗೂ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ

