Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಶಾ ಮುಕ್ತ ಭಾರತ ಅಭಿಯಾನ: ಶಾಲಾ-ಕಾಲೇಜುಗಳಲ್ಲಿ ಸಾಮೂಹಿಕ ಪ್ರತಿಜ್ಞೆ ಸ್ವೀಕಾರ


ಬಳ್ಳಾರಿ,ಆ.14
ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯು 5 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪಾರಿಣಾಮ ಕುರಿತು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ವಿಶ್ವವಿದ್ಯಾಲಯ, ಸರ್ಕಾರಿ ಕಚೇರಿಗಳಲ್ಲಿ, ವಸತಿ ನಿಲಯಗಳಲ್ಲಿ, ಸಮುದಾಯಗಳಲ್ಲಿ, ಸಾರ್ವಜನಿಕ ಸಂಸ್ಥೆಗಳಲ್ಲಿ, ಹಾಗೂ ಸಂಘ-ಸAಸ್ಥೆಗಳಲ್ಲಿ ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಅರಿವು ಮೂಡಿಸಲಾಯಿತು.
ವಾರ್ಷಿಕೋತ್ಸವ ಅಂಗವಾಗಿ ಬಳ್ಳಾರಿ ನಗರದ ಸರ್ಕಾರಿ ತಾಂತ್ರಿಕ ವಿದ್ಯಾಲಯದಲ್ಲಿ ಬುಧವಾರ ಸಾಮೂಹಿಕ ಪ್ರತಿಜ್ಞೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸುಮಾರು 1125 ವಿದ್ಯಾರ್ಥಿಗಳು ಹಾಗೂ 40 ತಾಂತ್ರಿಕ ಸಿಬ್ಬಂದಿಗಳು ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಿದರು.
ಹಿರಿಯ ಸಾಹಿತಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತೆ ಎನ್.ಡಿ.ವೆಂಕಮ್ಮ ಅವರು ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಯುವಜನತೆ ಮದ್ಯಪಾನ, ಮಾದಕ ವಸ್ತು, ಜೂಜಾಟ ಮುಂತಾದ ದುಷ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ತಮ್ಮನ್ನು ನಂಬಿಕೊAಡು ಬದುಕುತ್ತಿರುವ ಕುಟುಂಬದವರನ್ನು ಅನಾಥರನ್ನಾಗಿ ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಇಂದಿನ ವಿದ್ಯಾರ್ಥಿಗಳು ಹೆಚ್ಚಾಗಿ ಇಂತಹ ದುಷ್ಚಟಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳದೇ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜ ನಿರ್ಮಿಸಬೇಕೆಂದು ಕರೆ ನೀಡಿದರು.
ಮನೋ ಆರೋಗ್ಯ ಕಾರ್ಯಕರ್ತ ವೆಂಕಟೇಶ್ ಮಾದಕ ದ್ರವ್ಯ ವ್ಯಸನದ ದುಷ್ಪಾರಿಣಾಮಗಳ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಗೋವಿಂದಪ್ಪ ಹೆಚ್.ಎಂ., ಮೈತ್ರಿ ಸಮಗ್ರ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರದ ಮುಖ್ಯಸ್ಥ ಕುಮಾರಸ್ವಾಮಿ,  ಸರ್ಕಾರಿ ತಾಂತ್ರಿಕ ಹಾಗೂ ಕಾಲೇಜಿನ ಪ್ರಾಂಶುಪಾಲ ಆನಂದ್ ಹೆಚ್.ಎಂ ಸೇರಿದಂತೆ ಜಿಲ್ಲಾ ಸೇವಾದಳದ ಮುಖ್ಯಸ್ಥರು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ