Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ.ಮಹಾಂತೇಶ ದರಗದ್


----

ಕೊಪ್ಪಳ ಜೂನ್ 06 : ಜುಲೈ 12 ರಂದು ಕೊಪ್ಪಳ ಜಿಲ್ಲೆಯಾದ್ಯಂತ ರಾಷ್ಟೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಮಹಾಂತೇಶ ಎಸ್. ದರಗದ್ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಜುಲೈ 12 ರಂದು ನಡೆಯಲಿರುವ ರಾಷ್ಟೀಯ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಸಿ.ಚಂದ್ರಶೇಖರ ಅವರ ನಿರ್ದೇಶನದಂತೆ ಜುಲೈ 12 ರಂದು ಕೊಪ್ಪಳ ಜಿಲ್ಲೆಯಲ್ಲಿಯೂ ರಾಷ್ಟೀಯ ಲೋಕ್ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

ರಾಜಿ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ-ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಂಎಂಆರ್‌ಡಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹಂದಾಗಿದೆ. ರಾಜಿ ಸಂಧಾನದಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಪ್ರಕರಣವು ಇಬ್ಬರಿಗೂ ಒಪ್ಪಿಗೆಯಾಗುವಂತೆ ಕೊನೆಗೊಂಡು ಇಬ್ಬರ ಬಾಂಧವ್ಯ ಮೊದಲಿನಂತೆ ಉಳಿಯುತ್ತದೆ. ತಾವು ನ್ಯಾಯಾಲಯಕ್ಕೆ ತುಂಬಿದ ಕೋರ್ಟ್ ಶುಲ್ಕವನ್ನು ಸಂಪೂರ್ಣವಾಗಿ ವಾಪಸ್ ನೀಡಲಾಗುವುದು ಎಂದು ಹೇಳಿದರು.

ಪ್ರಕರಣವು ರಾಜಿಸಂಧಾನದ ಮೂಲಕ ಇತ್ಯರ್ಥವಾದರೆ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದ ಹಣ, ಸಮಯ ಹಾಗೂ ಸಂಬಂಧವನ್ನು ಉಳಿಸಿಕೊಳ್ಳಲು ಸಹಾಯಕವಾಗುತ್ತದೆ. ಕಾರಣ ಪಕ್ಷಗಾರರು ಜುಲೈ 12 ರಂದು ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜರಗುವ ರಾಷ್ಟೀಯ ಲೋಕ ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಸಾಥಿ ಸಮಿತಿ: ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡಂತೆ ಜಿಲ್ಲಾ ಸಾಥಿ ಸಮಿತಿಯನ್ನು ರಚಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರು ನಿರ್ದೇಶನದಂತೆ ಕೊಪ್ಪಳ ಜಿಲ್ಲಾ ಸಾಥಿ ಸಮಿತಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲೆಯ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಆರೋಗ್ಯ ಅಧಿಕಾರಿಗಳು, ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಪ್ಯಾನಲ್ ವಕೀಲರು, ಪ್ಯಾರಾ ಲೀಗಲ್ ವಾಲಂಟಿಯರ್ಸ್ಗಳು ಈ ಸಮಿತಿಗೆ ಸದಸ್ಯರಾಗಿರುತ್ತಾರೆ.

ಸಮಿತಿಯ ಮುಖ್ಯ ಉದ್ದೇಶ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಆಧಾರ್ ಕಾರ್ಡ್ನ್ನು ಮಾಡಿಸದೇ ಇರುವಂತಹ ಪರಿತ್ಯಕ್ತ ಮಕ್ಕಳ ಗುರುತಿಸುವಿಕೆ ಹಾಗೂ ಆಧಾರ ಕಾರ್ಡ್ ನೋಂದಣಿ ಮಾಡುವುದು ಮತ್ತು ಈ ಮೂಲಕ ಪರಿತ್ಯಕ್ತ ಮಕ್ಕಳಿಗೆ ಕಾನೂನು ಬದ್ಧವಾಗಿ ಸಿಗಬೇಕಾದ ಸರಕಾರಿ ಸವಲತ್ತುಗಳನ್ನು ಒದಗಿಸುವುದಾಗಿರುತ್ತದೆ. ಈ ಕಾರಣಕ್ಕಾಗಿ ಜಿಲ್ಲೆಯ ಪ್ರಜ್ಞಾವಂತರು ಮೇಲೆ ಹೇಳಿದಂತಹ ಮಕ್ಕಳು ಇದ್ದಲ್ಲಿ ಈ ಕುರಿತು ಸದಸ್ಯರಿಗೆ ಮಾಹಿತಿ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನೇಮಕಾತಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳದಲ್ಲಿ ವಕೀಲರುಗಳಿಗೆ ಮುಖ್ಯ ಕಾನೂನು ಅಭಿರಕ್ಷಕರು, ಉಪ ಮುಖ್ಯ ಕಾನೂನು ಅಭಿರಕ್ಷಕರು ಹಾಗೂ ಸಹಾಯಕ ಕಾನೂನು ಅಭಿರಕ್ಷಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದ್ದು, ಜೂನ್ 9 ರಿಂದ ಜೂನ್ 19 ರೊಳಗಾಗಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಸಾಯಂಕಾಲ 6 ಗಂಟೆಯ ಒಳಗಾಗಿ ಅರ್ಹತೆ ಹೊಂದಿದ ಅರ್ಜಿದಾರರು ಅರ್ಜಿಯನ್ನು ಸಲ್ಲಿಸಬಹಂದಾಗಿದೆ. ಹೆಚ್ಚಿನ ಮಾಹಿತಿಗಾಗಿ https://koppal.dcourts.gov.in ಹಾಗೂ https://koppal.dcourts.gov.in/dlsa-tlsa/ ಲಿಂಕನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಮಹಾಂತೇಶ ಎಸ್. ದರಗದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ ಜಿ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರ.ದ.ಸ ಎಂ.ಬಿ.ಹನೀಫ್ ಸೇರಿದಂತೆ ನ್ಯಾಯಾಲಯದ ಇತರೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ