ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರೂ.600 ಕೋಟಿ ವೆಚ್ಚದಲ್ಲಿ ರಾಜ್ಯದಾದ್ಯಂತ 10 ಜಿಟಿಟಿಸಿ (GTTC) ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಕೇಂದ್ರಗಳು ಕಾರ್ಮಿಕರ ಮಕ್ಕಳಿಗೆ ತಾಂತ್ರಿಕ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿಗೆ ಸಹಕಾರಿಯಾಗಲಿವೆ.
ಇದೇ ವೇಳೆ, 6ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಪ್ರಸಕ್ತ ಸಾಲಿನಲ್ಲಿ 62 ನೂತನ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.
Also read