Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

ಚಿತ್ರದುರ್ಗ 

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ 220/66/11 ಕೆ.ವಿ ಹಿರಿಯೂರು ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ ವರೆಗೆ ಹಾಲಿ ಇರುವ 18.928 ಕಿ.ಮೀ ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು ಹಾಗೂ ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು 66/11 ಕೆ.ವಿ ಹರಿಯಬ್ಬೆ ಉಪ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್‍ವರೆಗೆ ಹಾಲಿ ಇರುವ 9.628 ಕಿ.ಮೀ ಉದ್ದದ 66 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು, ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ.

ಈ 66 ವಿದ್ಯುತ್ ಮಾರ್ಗವನ್ನು ಜುಲೈ 20ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66 ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ಪಡೆದುಕೊಂಡು ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.

ವಿದ್ಯುತ್ ಹಾದುಹೋಗುವ ಪ್ರದೇಶಗಳು: ಮ್ಯಾಕ್ಯೂರಹಳ್ಳಿ, ಬಬ್ಬೂರು, ಹೇಮದಳ, ಅಂಬಲಗೆರೆ, ಬಿದರಕೆರೆ, ಹರಿಯಬ್ಬೆ, ಶಿಡ್ಲಯ್ಯನಕೋಟೆ, ಕ್ಯಾತನಮಳೆ, ಗೊಲ್ಲರಹಟ್ಟಿ ಗೂಳ್ಯ, ರಂಗೇನಹಳ್ಳಿ ಮತ್ತು ಚಂದ್ರಗಿರಿ ಗೊಲ್ಲಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ