Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ

ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ 'ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ' ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜ್‌ ಅಡಿ ಪ್ರತಿ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ.ಭಾರತ್ ಗೌರವ್ ದಕ್ಷಿಣ ಕ್ಷೇತ್ರ ಯಾತ್ರೆ ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಒಳಗೊಂಡಿದೆ. ವಿಶೇಷ ರೈಲುಗಳು 23/6/2024ರಂದು ಹೊರಟು 28/6/2024ಕ್ಕೆ ವಾಪಸ್ ಆಗಲಿವೆ. 1/7/2024ರಂದು ಹೊರಟು, 6/7/2024ಕ್ಕೆ ವಾಪಸ್ ಆಗಲಿವೆ.

ಈ ರೈಲುಗಳನ್ನು ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ ಮತ್ತು ಬೆಂಗಳೂರು ನಗರದ ಯಶವಂತಪುರದಲ್ಲಿ ಹತ್ತಬಹುದು/ ಇಳಿಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ಯಾಕೇಜ್‌ ಮೊತ್ತ: 'ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ' ಪ್ಯಾಕೇಜ್ ಒಟ್ಟು ಮೊತ್ತ 15,000 ರೂ.ಗಳು. ಕರ್ನಾಟಕ ಸರ್ಕಾರದಿಂದ ಸಹಾಯಧನ 5 ಸಾವಿರ ರೂ.ಗಳು. ಯಾತ್ರಿಕರು ಪಾವತಿ ಮಾಡಬೇಕಾದ ಮೊತ್ತ 10,000 ರೂ.ಗಳು. ಯಾತ್ರಾರ್ಥಿಗಳ ಆರೋಗ್ಯ ಹಾಗೂ ಕ್ಷೇಮದ ದೃಷ್ಟಿಯಿಂದ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ 'ಸಿ' ಅಧಿಸೂಚಿತ ದೇವಾಲಯ/ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ ನೌಕರರು ಮತ್ತು ಅವರ ಕುಟುಂಬದ ಒಬ್ಬ ಸದಸ್ಯರನ್ನು ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ ಯೋಜನೆಯಡಿ ಉಚಿತವಾಗಿ ಯಾತ್ರೆಗೆ ಕಳುಹಿಸಲಾಗುತ್ತದೆ.
ಈ ಯಾತ್ರೆಯಲ್ಲಿ ಸಂಚಾರ ನಡೆಸಲು ಜನರು ಐಆರ್‌ಸಿಟಿಸಿ ವೆಬ್‌ಸೈಟ್‌ ಮೂಲಕ ಬುಕ್ಕಿಂಗ್‌ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8595931291, 8595931292, 8595931294 ಸಂಖ್ಯೆಗೆ ಸಂಪರ್ಕಿಸಬಹುದು. ದಕ್ಷಿಣ ಕ್ಷೇತ್ರಗಳ ಯಾತ್ರೆ ಪ್ಯಾಕೇಜ್ ವಿಶೇಷತೆಗಳು * ರಾಮೇಶ್ವರ- ರಾಮೇಶ್ವರ ದೇವಾಲಯ * ಕನ್ಯಾಕುಮಾರಿ - ಭಗವತಿ ದೇವಾಲಯ * ಮದು ರೈ- ಶ್ರೀ ಮೀನಾಕ್ಷಿ ದೇವಾಲಯ * ತಿರುವನಂತಪುರಂ - ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯ ದರ್ಶನ 2022ರ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಈ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕವಾಗಿತ್ತು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.

ಈ ಯಾತ್ರೆ ಯಶಸ್ಸಿನ ಬಳಿಕ ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ 'ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ'ಯ ವಿವಿಧ ಪ್ಯಾಕೇಜ್ ಘೋಷಣೆ ಮಾಡಿತು. ಪ್ಯಾಕೇಜ್‌ ಅಡಿ ಯಾತ್ರಾರ್ಥಿಗಳಿಗೆ ಸಹಾಯಧನ ಘೋಷಣೆ ಮಾಡಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ