Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜುಲೈ 02 ರಂದು ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿ ಜಯಂತಿ ಆಚರಣೆ


ರಾಯಚೂರು ಜೂನ್ 30  ಇಲ್ಲಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮ0ದಿರದಲ್ಲಿ ಜುಲೈ 02 ಬೆಳಿಗ್ಗೆ 11 ಗಂಟೆಗೆ ಡಾ.ಫ.ಗು.ಹಳಕಟ್ಟಿ ಅವರು ಜಯಂತಿ ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜಿ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶ್ ಕುಮಾರ ಸಿಂಗ್, ಕಲಬುರಗಿ ವಿಭಾಗದ ಆಯುಕ್ತರಾದ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಹಿರಿಯ ಸಾಹಿತಿ ಡಾ.ಚನ್ನಬಸವ ಹಿರೇಮಠ ಅವರು ಡಾ.ಫ.ಗು.ಹಳಕಟ್ಟಿ ಜಯಂತಿ ಕುರಿತು ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ