Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 02 ರಂದು ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ





ಬಳ್ಳಾರಿ,ಏ.28

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಮೇ 02 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಂಗನಕಲ್ಲು ರಸ್ತೆಯ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಶ್ರೀ ಶೃಂಗೇರಿ ಶಂಕರಮಠದ ಗೌರವ ವ್ಯವಸ್ಥಾಪಕರಾದ ಬಿ.ಕೆ.ಬಿ.ಎನ್.ಮೂರ್ತಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವೇದಬ್ರಹ್ಮ ಶ್ರೀರಾಮ ಸುಬ್ರಹ್ಮಣ್ಯ ಶರ್ಮ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ರಾಜೇಶ್ವರಿ ಅವರ ತಂಡದಿAದ ಭಕ್ತಿ ಸಂಗೀತ ಇರಲಿದೆ.

*ಮೆರವಣಿಗೆ:*

ಜಯಂತಿ ಅಂಗವಾಗಿ ಮೇ 01 ರಂದು ಸಂಜೆ 4.30 ಗಂಟೆಗೆ ನಗರದ ಸತ್ಯನಾರಾಯಣ ಪೇಟೆ- ವೆಂಕಟೇಶ್ವರ ದೇವಸ್ಥಾನದಿಂದ- ಇಂದಿರಾ ವೃತ್ತ-ಬೆಂಗಳೂರು ರಸ್ತೆ-ಸಭಾಪತಿ ಬೀದಿ-ಶ್ರೀ ಶೃಂಗೇರಿ ಶಂಕರಮಠದವರಗೆ ಮೆರವಣಿಗೆ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು