Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಒಂದು ದಿನದ ಕಾರ್ಯಾಗಾರ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಶಸ್ತ್ಯ:ಡಾ.ಗೊಳ್ಳೆ ಶಿವಶರಣ.ಬಿ

 

ಬಳ್ಳಾರಿ,ಮಾ.04
ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಕಲಬುರಗಿಯ ಕಾಲೇಜು ಶಿಕ್ಷಣ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಗೊಳ್ಳೆ ಶಿವಶರಣ.ಬಿ ಅವರು ಹೇಳಿದರು.
ಮಂಗಳವಾರ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ಸಹಯೋಗದೊಂದಿಗೆ ‘ಕಲಿಕೆ ಜೊತೆಗೆ ಕೌಶಲ್ಯ 2.0’ ಯೋಜನೆ ಕುರಿತು ಒಂದು ದಿನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರ ವೇಗವಾಗಿ ಬದಲಾಗುತ್ತಿರುವುದರಿಂದ ಉದ್ಯೋಗ ಸಂಬAಧಿತ ಕೌಶಲ್ಯಗಳು ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೌಶಲ್ಯ ವಂಚಿತರ ಪ್ರಮಾಣ ಶೇ.60 ರಷ್ಟು ಇದೆ. ಬಹುಮುಖ ಪ್ರತಿಭೆಗಳು ಮಾತ್ರ ಉದ್ಯೋಗಕ್ಕೆ ಆರ್ಹರಾಗಿದ್ದಾರೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಕೌಶಲ್ಯಗÀಳನ್ನು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.
ಕರ್ನಾಟಕ ಕೌಶಲ್ಯ ಅಭವೃದ್ಧಿಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ರಾಗಪ್ರಿಯ.ಆರ್ ಅವರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೌಶಲ್ಯ ಆಧಾರಿತ ಶಿಕ್ಷಣ ಮಹತ್ವಪೂರ್ಣವಾಗಿದೆ. ಈಗಾಗಲೇ ಕೌಶಲ್ಯಾಧಾರಿತ ಶಿಕ್ಷಣವನ್ನು ಹಲವಾರು ವಿದ್ಯಾರ್ಥಿಗಳು ಪಡೆದು ಒಳ್ಳೆಯ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.
ವಿಶೇಷ ಆಹ್ವಾನಿತರಾಗಿ ವಿಡಿಯೋ ಸಂವಾದದ ಮೂಲಕ ಕಾಲೇಜು ಶಿಕ್ಷಣ ಬೆಂಗಳೂರು ನಿರ್ದೇಶಕರಾದ ಪ್ರೊ.ಶೋಭಾ.ಜಿ ಅವರು ಮಾತನಾಡಿ, ಶಿಕ್ಷಣ ರಂಗದಲ್ಲಿ ಪದವಿ ಜೊತೆಗೆ ಜ್ಙಾನಾಧಾರಿತ ಕೌಶಲ್ಯಗಳು ಅವಶ್ಯವಾಗಿವೆ. ಈ ನಿಟ್ಟಿನಲ್ಲಿ ಈಗಾಗಲೇ ನಾಲ್ಕು ವಿಶ್ವವಿದ್ಯಾಲಯಗಳ 28 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೌಶಲ್ಯವೃದ್ಧಿ ಪಡೆಸಿಕೊಂಡಿದ್ದಾರೆ ಎಂದರು.
ವಿಶ್ವವಿದ್ಯಾಯದ ಮೌಲ್ಯಮಾಪನ ಕುಲಸಚಿವರಾದ ಡಾ. ಎನ್.ಎಂ.ಸಾಲಿ ಅವರು ಮಾತನಾಡಿ, ವಿಶ್ವವಿದ್ಯಾಲಯಗಳು ಸಾಂಪ್ರಾದಾಯಕದಿAದ ವೈಜ್ಞಾನಿಕತೆಯಡೆಗೆ ಸಾಗಬೇಕಾಗಿದೆ. ಶಿಕ್ಷಣದಲ್ಲಿ ಹಲವಾರು ಕೌಶಲ್ಯಗಳಿಂದ ಜಗತ್ತು ಮುಂದುವರೆಯುತ್ತಿದೆ. ನಾವು ಅದರೊಂದಿಗೆ ಸಾಗಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒಲವು ಹೊಂದಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಂದ ಸ್ಪೂರ್ತಿ ಪಡೆದು, ಕೌಶಲ್ಯಗಳ ಕೊರತೆಯನ್ನು ಹೋಗಲಾಡಿಸಬೇಕು. ಕೌಶಲ್ಯ ಆಧಾರಿತ ಶಿಕ್ಷಣದಿಂದ ವಿಶ್ವಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ನಾವೆಲ್ಲರು ಶ್ರಮವಹಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ರಾಗ ಪ್ರೀಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಎಸ್.ಎನ್.ರುದ್ರೇಶ್, ಕಾರ್ಯಕ್ರಮ ಸಂಯೋಜಕರಾದ ಡಾ.ನಿರ್ಮಲ.ಜೆ ವೇದಿಕೆಯಲ್ಲಿದ್ದರು. ಕಾರ್ಯಕ್ರಮವನ್ನು ಡಾ.ಬಿ ಸರೋಜಾ ನಿರೂಪಿಸಿದರು.
ಈ ವೇಳೆ ವಿವಿಯ ಅಧೀನದ ವಿವಿಧ ಕಾಲೇಜು ಪ್ರಾಂಶುಪಾಲರು ಹಾಗು ಸಿಬ್ಬಂದಿಗಳು, ವಿವಿಯ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಹಾಜರಿದ್ದರು.
----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ