ರಾಯಚೂರು ಜನವರಿ 30 : ಪೇಪರ್ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಯಚೂರಿನ ಉಪ ನೋಂದಣೆ ಕಚೇರಿಯಲ್ಲಿ ಪೇಪರ್ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆಯ ಕುರಿತು ತರಬೇತಿಯನ್ನು ಜನವರಿ 31ರ ಮಧ್ಯಾಹ್ನ 3 ಗಂಟೆಗೆ ಹಮಿಕೊಳ್ಳಲಾಗಿದ್ದು, ತರಬೇತಿಯ ಸದುಪಯೋಗವನ್ನು ಸಾರ್ವಜನಿಕರು ಪಡೆಯಬಹುದಾಗಿದೆ.
ಸಂಬOಧಪಟ್ಟ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ರಾಯಚೂರು ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರ ವರ್ಗದವರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

