Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಿಜಿ ಸಿಇಟಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ, ಆಗಸ್ಟ್ 01 , 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಡಳಿತ ಕಚೇರಿಯ ಕಚೇರಿ ಸಹಾಯಕರಾದ ಪ್ರದೀಪ್ ನಿಕ್ಕಂ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆ.01 ರಂದು ಏರ್ಪಡಿಸಲಾಗಿದ್ದ 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ ವ್ಯವಸ್ಥೆ, ಮೂಲಭೂತ ಸೌಕರ್ಯಗಳು ಸೇರಿದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಆ.04 ರಂದು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಗಿನ ಅಧಿವೇಶನದಲ್ಲಿ ಎಂಸಿಎ ಮತ್ತು ಮಧ್ಯಾಹ್ನದ ಅಧಿವೇಶನದಲ್ಲಿ ಎಂಬಿಎ ಗೆ ಪಿಜಿಸಿಇಟಿ ಪರೀಕ್ಷೆಗಳು ನಡೆಯಲಿವೆ.

ಎಂಸಿಎ ಗೆ 1286 ಮತ್ತು ಎಂಬಿಎ ಗೆ 2421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಿ ಈಗಾಗಲೇ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-23 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸಾಗಾಟ ವಾಹನಕ್ಕೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೂರು ಜನ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಹಾಗೂ ಪ್ರತಿ ಕೇಂದ್ರಕ್ಕೆ ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಜಾಗೃತ ದಳದ ಸಿಬ್ಬಂದಿಗಳು ಮತ್ತು ಅಗತ್ಯವಿರುವ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.

ಪರೀಕ್ಷೆಗಳನ್ನು ಶಾಂತಯುತವಾಗಿ ನಡೆಸಲು ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಓರ್ವ ಮಹಿಳಾ ಮತ್ತು ಓರ್ವ ಪುರಷ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತರಲು ಪ್ರತಿ ಮಾರ್ಗಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆಗೆ ಕೋರಲಾಗಿದೆ ಎಂದರು.

ಡಿಡಿಪಿಯು ಚಂದ್ರಪ್ಪ ಗುಂಡೆಪಲ್ಲಿ ಮಾತನಾಡಿ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸಲಾಗಿದ್ದು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ಪರೀಕ್ಷೆಗಳು ನಡೆಯಲು ಅವಶ್ಯಕವಾದ ಸಕಲ ಸಿದ್ದತಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ವಿವಿಧ ಕಾಲೇಜುನಗಳ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ