Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸದೃಢ ರಾಷ್ಟçಕ್ಕೆ ವಿದ್ಯಾರ್ಥಿಗಳ ಪಾತ್ರ ಮುಖ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ


ಬಳ್ಳಾರಿ,ಫೆ.06



ಸ್ಪರ್ಧಾತ್ಮಕ ಯುಗದಲ್ಲಿ ಸದೃಢ ರಾಷ್ಟ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಬುಧವಾರದಂದು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿಯ ಸೇವಾ ಯೋಜನೆ ಘಟಕ ಬಳ್ಳಾರಿ, ಉನ್ನತಿ ಫೌಂಡೇಶನ್ ಬೆಂಗಳೂರು, ಉದ್ಯೋಗ- ಕೌಶಲ್ಯ ಅಭಿವೃದ್ದಿ ಘಟಕ ಸಿಡಾಕ್ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿಗಳ ಶ್ರೇಯಸ್ಸಿಗಾಗಿ ಮುಂಜಾನೆಯ ಹಾಗೂ ಮುಸ್ಸಂಜೆಯ ಮಾತು ಮತ್ತು ಮಂಥನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ. ಸತತ ಪ್ರಯತ್ನ ಮತ್ತು ಗುಣಮಟ್ಟದ ವಿದ್ಯಾಭ್ಯಾಸದಿಂದ ವಿದ್ಯಾರ್ಥಿಗಳು ಯಶಸ್ಸು ಕಾಣಬಹುದು. ಉನ್ನತ ಸ್ಥಾನಮಾನದ ಉದ್ಯೋಗದ ಕನಸು ಹೊಂದಿರುವವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.

ಐಎಎಸ್, ಐಪಿಎಸ್ ಗಳಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಎಂದು ಮೂರು ಹಂತ ಇರುತ್ತವೆ. ವಿದ್ಯಾರ್ಥಿಗಳು ಸ್ವಯಂ ಪ್ರೇರಣೆ, ಸಾಫ್ಟ್ ಸ್ಕಿಲ್ ಕೌಶಲ್ಯ ಅಳವಡಿಸಿಕೊಂಡು ಯಶಸ್ಸು ಕಾಣಬಹುದು ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಮಯ ನಿರ್ವಹಣೆ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಪಠ್ಯಕ್ರಮ ಅಧ್ಯಯನದ ಜೊತೆಗೆ ದಿನ-ಪತ್ರಿಕೆ ಓದುವ ಹವ್ಯಾಸ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.

ಪದವಿ ಹಂತದಲ್ಲಿ ಅನೇಕ ಹೊಸ ಕೋರ್ಸ್ಗಳನ್ನು ಆರಂಭಿಸಲು ವಿಶ್ವವಿದ್ಯಾಲಯವು ಮುನ್ನುಡಿ ಬರೆದಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅಭಿವೃದ್ದಿಪಡಿಸುವುದು ವಿವಿಯ ಗುರಿಯಾಗಿದೆ ಎಂದರು.

ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ ಎಸ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಾಣೇಶ್.ಎಸ್., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ