Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಗಸ್ಟ್ನಲ್ಲಿ ರಾಯಚೂರಲ್ಲಿ ಸೇನಾ ನೇಮಕಾತಿ ರ‍್ಯಾಲಿ: ಸಹಕಾರ ನೀಡಲು ಅಧಿಕಾರಿಗಳಿಗೆ ಸಲಹೆ


ರಾಯಚೂರು ಜುಲೈ 03 : ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 08 ರಿಂದ ಆಗಸ್ಟ್ 22ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲೆಯ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕೆಂದು ರಾಯಚೂರು ವಿಭಾಗೀಯ ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು ಹೇಳಿದರು.
ಜುಲೈ 03ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜರುಗಿದ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಕೃಷಿ ವಿಶ್ವವಿದ್ಯಾಲಯದ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಬೇರೆ, ಬೇರೆ ಜಿಲ್ಲೆಗಳಿಂದ ಸುಮಾರು 15 ರಿಂದ 16 ಸಾವಿರ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಈ ರ‍್ಯಾಲಿಯ ಯಶಸ್ವಿ ನಿರ್ವಹಣೆಗಾಗಿ ವೇದಿಕೆ ಸಮಿತಿ, ಭದ್ರತಾ ಸಮಿತಿ, ಮೂಲಭೂತ ಸೌಕರ್ಯ ಸಮಿತಿ, ಸಾರಿಗೆ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ, ಆರೋಗ್ಯ ನೈರ್ಮಲ್ಯೀಕರಣ ಸಮಿತಿ, ಪ್ರಚಾರ ಮತ್ತು ಮಾಧ್ಯಮ ಸಮಿತಿ, ವಿದ್ಯುತ್ ಸರಬರಾಜು ಸಮಿತಿ ಹಾಗೂ ದಾಖಲೆಗಳ ಪರಿಶೀಲನೆ ಸಮಿತಿ ರಚಿಸಲಾಗಿದೆ.
ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಹಾಗೂ ನಿಯೋಜಿತ ಸಿಬ್ಬಂದಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮತ್ತು ಬಳಕೆಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಹಾಗೂ ಕ್ರೀಡಾಂಗಣದಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು. ಅಭ್ಯರ್ಥಿಗಳಿಗೆ ತಂಗಲು ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಅಧಿಕಾರಿಗಳ ತಂಡ ಹಾಗೂ ಅಂಬುಲೆನ್ಸ್ ವ್ಯವಸ್ಥೆ, ಅಗ್ನಿಶಾಮಕ ತಂಡ, ವಿದ್ಯುತ್ ದೀಪದ ವ್ಯವಸ್ಥೆ ಸೇರಿದಂತೆ ಮುಂತಾದ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೇಮಕಾತಿ ರ‍್ಯಾಲಿಗೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ರ‍್ಯಾಲಿ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗುವುದು. ಜನಸಂದಣಿ ನಿರ್ವಹಣೆಗಾಗಿ ಕ್ರೀಡಾಂಗಣದ ಹೊರಗಡೆ, ಮುಂಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ತೊಂದರೆಯಾಗದAತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ಹೇಳಿದರು.
ಈ ವೇಳೆ ಸೇನಾ ನೇಮಕಾತಿ ಅಧಿಕಾರಿ ಎ.ಕೆ.ಉಪಾಧ್ಯಾಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಗಸ್ಟ್ 08 ರಿಂದ ಆಗಸ್ಟ್ 22ರವರೆಗೆ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಗೆ ರಾಯಚೂರು ಜಿಲ್ಲಾಡಳಿತದಿಂದ ನಮಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು. ನೇಮಕಾತಿ ಪಾರದರ್ಶಕವಾಗಿ ನಡೆಸುತ್ತಿರುವುದರಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಮತ್ತು ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆಗಾಗಿ ಕಂದಾಯ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ಸೇನಾ ನೇಮಕಾತಿ ರ‍್ಯಾಲಿಯು ಸುಸೂತ್ರವಾಗಿ ನಡೆದರೆ ರಾಯಚೂರು ಜಿಲ್ಲಾಡಳಿತಕ್ಕೆ ಮತ್ತು ನಮ್ಮ ಸೇನೆಗೂ ಒಳ್ಳೆಯ ಹೆಸರು ಬರುತ್ತದೆ. ಹಾಗಾಗಿ ರ‍್ಯಾಲಿಯನ್ನು ಸುವ್ಯವಸ್ಥಿತವಾಗಿ ನಡೆಸಲು ತಮ್ಮ ಸಹಕಾರ ನಮಗೆ ಅತ್ಯಗತ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ ಬಾಬು, ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ದೇಸಾಯಿ, ಪಶ್ಚಿಮ ವೃತ್ತದ ಸಿಪಿಐ ನಿಂಗಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವ್ಯವಸ್ಥಾಪಕ ಸಂತೋಷ, ಪಶ್ಚಿಮ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ, ಅಗ್ನಿಶಾಮಕ ದಳದ ರವೀಂದ್ರ ಘಟಿಗಿ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ