Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಶಾಲಾ ಪ್ರಾರಂಭೋತ್ಸವ ದಿನ ಪಠ್ಯಪುಸ್ತಕ ವಿತರಣೆಗೆ ಸೂಚನೆ - ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಜಿಪಂ ಸಿಇಓ ರಾಹುಲ್‌ ಶಿಂಧೆ





ಬೆಳಗಾವಿ, ಮೇ 24: ಸರಕಾರದಿಂದ ಸರಬರಾಜು ಮಾಡಲಾಗಿರುವ ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳನ್ನು ಮೇ 29 ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವದ ದಿನ ವಿತರಣೆ ಮಾಡಬೇಕು. ಪ್ರತಿ ನಾಲ್ಕನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆಯನ್ನು ನಡೆಸಿ ಅವರ ಸಹಕಾರದಿಂದ ಮಕ್ಕಳ ದಾಖಲಾತಿ, ಹಾಜರಾತಿಯನ್ನು ಕಲಿಕೆಗೆ ಸಮನ್ವಯ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.



ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ(ಮೇ 23) ಜರುಗಿದ "ನಮ್ಮ ಶಾಲೆ-ನಮ್ಮ ಜವಾಬ್ದಾರಿ" ಶಾಲಾ ಪ್ರಾರಂಭೋತ್ಸವ ಹಾಗೂ 2025-26 ನೇ ಸಾಲಿನ ಶೈಕ್ಷಣಿಕ ಗುಣಮಟ್ಟದ ಪ್ರಗತಿಗಾಗಿ ಶಿಕ್ಷಣ ಇಲಾಖೆಯ ಮೇಲುಸ್ತರುವಾರಿ ಅಧಿಕಾರಿಗಳ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಗುಣಾತ್ಮಕ ಶಿಕ್ಷಣಕ್ಕಾಗಿ 1 ರಿಂದ 10ನೇ ತರಗತಿಯವರೆಗೆ ನಿರ್ದಿಷ್ಟ ಮತ್ತು ವಿಶಿಷ್ಟ ಯೋಜನೆಯನ್ನು ರೂಪಿಸಬೇಕು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಆರಂಭದಿಂದಲೇ ವಿಶೇಷ ಚಟುವಟಿಕೆ ರೂಪಿಸಿ 5 ಹಾಗೂ 8 ತರಗತಿಯ ಮಕ್ಕಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿನ ಗ್ರಂಥಾಲಯಗಳ ಬಳಕೆ ಮೂಲಕ ಶಿಕ್ಷಣದ ಗುಣಮಟ್ಟ ತಿಳಿಯಲು ಯೋಜಿತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.



ಅಧಿಕಾರಿಗಳ ಶಾಲಾ ಭೇಟಿ ಕಡ್ಡಾಯ:



ನಾನು ಸಹ ಶಾಲೆಗಳಿಗೆ ತೆರಳಿ ಪಾಠ ಮಾಡುತ್ತೇನೆ. ಅದೇ ರೀತಿ ಎಲ್ಲ ಅಧಿಕಾರಿಗಳೂ ಶಾಲಾ ಭೇಟಿ ಕಡ್ಡಾಯವಾಗಿ ಮಾಡಬೇಕು. ಎಲ್ಲ ಅಧಿಕಾರಿಗಳು ದತ್ತು ಶಾಲೆಗೆ ತೆರಳಿ ಪಾಠ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.



ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಯ, ವಿಷಯ ಪರಿವೀಕ್ಷಕರು, ಸಿ.ಆರ್.ಪಿ., ಬಿ.ಆರ್.ಪಿ., ಡಯಟ್ ಉಪನ್ಯಾಸಕರೂ ಸೇರಿದಂತೆ ಎಲ್ಲ ಅಧಿಕಾರಿಗಳು ಶಾಲಾ ಭೇಟಿಗಳ ಮೂಲಕ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಬೇಕು ಎಂದು ತಿಳಿಸಿದರು.



ಕ್ರೀಡೆಗಳಿಗೆ ವಿಶೇಷ ಆದ್ಯತೆ ನೀಡಬೇಕು. ದೈಹಿಕ ಶಿಕ್ಷಕರು ಲಭ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ಬಳಕೆ ಮಾಡುಕೊಂಡು ಮಕ್ಕಳಿಗೆ ಕಡ್ಡಾಯವಾಗಿ ತರಬೇತಿಯನ್ನು ನೀಡಬೇಕು.

ಶಾಲೆಯಲ್ಲಿರುವ ಕಂಪ್ಯೂಟರ್, ಕ್ರೀಡಾ ಸಾಮಗ್ರಿ ಮತ್ತು ವಿಜ್ಞಾನ ಉಪಕರಣಗಳನ್ನು ಕಡ್ಡಾಯವಾಗಿ ಬಳಕೆ ಮಾಡಿಕೊಂಡು ಗುಣಾತ್ಮಕ ಶಿಕ್ಷಣ ನೀಡಬೇಕು.



ಇಲಾಖೆಯ ಸೂಚನೆಗಳು ಮತ್ತು ಅವಶ್ಯಕತೆಯನ್ನು ಅರಿತುಕೊಂಡು ಪ್ರತಿ ಮಗುವಿಗರ ಮಧ್ಯಾಹ್ನ ಉಪಾಹಾರ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ರಾಹುಲ್‌ ಶಿಂಧೆ ನಿರ್ದೇಶನ ನೀಡಿದರು.



ಬೆಂಚ್ ಅಭಿಯಾನದ ಮೂಲಕ ಸರಕಾರಕ್ಕೆ ಅಂದಾಜು ಐದು ಕೋಟಿ ರೂಪಾಯಿ ಅನುದಾನ ಉಳಿತಾಯ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಜಿಲ್ಲೆಯಲ್ಲಿ ಅತ್ಯಂತ ಶಿಸ್ತಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿರುವುದಕ್ಕೆ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.



ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಎಲ್ಲ ಶೈಕ್ಷಣಿಕ ಮೇಲುಸ್ತುವಾರಿ ಅಧಿಕಾರಿಗಳಿಗೆ ನಲಿಕಲಿ, 4 ರಿಂದ 7 ರವರೆಗಿನ ವಿದ್ಯಾರ್ಥಿಗಳಿಗೆ ಹಾಗೂ 8,9,10 ನೇ ತರಗತಿಯ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕ್ರಿಯಾಯೋಜನೆ ಪರಿಚಯಿಸಲಾಯಿತು.



ಇದಲ್ಲದೇ ಮುಂಬರುವ ದಿನಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನ, ದಾಖಲಾತಿ, ಹಾಜರಾತಿ, ಮೂಲ ಸೌಕರ್ಯಗಳ ಒದಗಿಸುವಿಕೆ, ಇನ್ ಸ್ಪೈರ್ ಅವಾರ್ಡ್, ಕಂಪ್ಯೂಟರ್ ಶಿಕ್ಷಣದ ಪರಿಚಯಾತ್ಮಕ ವಿವರಣೆ ನೀಡಲಾಯಿತು. ಕ್ರೀಡಾ ಸಾಮಗ್ರಿಗಳ ಸದ್ಬಳಕೆಯ ಕ್ರಿಯಾಯೋಜನೆ ಕೂಡ ಒದಗಿಸಲಾಯಿತು.



ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಬೆಳಗಾವಿ(ದ) ಉಪ ನಿರ್ದೇಶಕರಾದ ಶ್ರೀಮತಿ ಎಲ್.ಎಸ್.ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಗಂಗಾಧರ್ ದಿವಟರ ಮತ್ತಿತರರು ಉಪಸ್ಥಿತರಿದ್ದರು.

ಚಿಕ್ಕೋಡಿ ಉಪ ನಿರ್ದೇಶಕ ಸೀತಾರಾಮು ಆರ್.ಎಸ್.. ವಂದಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ