Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಅಸಮತೋಲನ ನಿವಾರಣಾ ಸಮಿತಿ ವಿಭಾಗಮಟ್ಟದ ಸಭೆ ... ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ: ಪ್ರೊ.ಗೋವಿಂದರಾವ್





ಬೆಳಗಾವಿ, ಫೆ‌.20: ಸರಕಾರವು ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ನು 2007-08 ರಿಂದ ಜಾರಿಗೊಳಿಸಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ಸದರಿ ವರದಿಯ ಪುನರ್ ವಿಮರ್ಶೆ ಮಾಡುವುದರ ಜತೆಗೆ ಸದ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ಆಧರಿಸಿ ಹೊಸ ಮಾರ್ಗಸೂಚಿ ಅಥವಾ ಶಿಫಾರಸ್ಸುಗಳ ಅಗತ್ಯವಿದೆ. ಆದ್ದರಿಂದ ಸಮಿತಿಯು 40 - 50 ಸೂಚ್ಯಂಕಗಳನ್ನು ಪಟ್ಟಿ‌ ಮಾಡಿಕೊಂಡಿದ್ದು, ಅವುಗಳ ಆಧಾರದ‌ ಮೇಲೆ ವಿಸ್ತೃತವಾಗಿ ಅಧ್ಯಯನ ಕೈಗೊಂಡು ಅಗತ್ಯ ಕ್ರಮಗಳನ್ನು ಸಮಿತಿಯು ಶಿಫಾರಸ್ಸು ಮಾಡಲಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷರಾದ ಪ್ರೊ.ಎಂ.ಗೋವಿಂದರಾವ್ ಹೇಳಿದರು.



ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಗುರುವಾರ(ಫೆ.20) ಜರುಗಿದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ರಾಜ್ಯದ ನಾಲ್ಕು ವಿಭಾಗಗಳಲ್ಲಿ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳಿಂದ ಸಲಹೆ/ಅಭಿಪ್ರಾಯಗಳನ್ನು ಆಲಿಸಲಾಗುತ್ತಿದೆ. ಡಾ.ನಂಜುಂಡಪ್ಪ 2002 ಕ್ಕೆ ವರದಿ ಸಲ್ಲಿಸಿರುತ್ತಾರೆ. ಅವರ ವರದಿಯು 35 ಸೂಚ್ಯಂಕಗಳ ಆಧಾರದಲ್ಲಿ ರಚಿಸಲಾಗಿರುತ್ತದೆ. ಅತ್ಯಂತ ಹಿಂದುಳಿದ, ಹಿಂದುಳಿದ ತಾಲ್ಲೂಕುಗಳೆಂದು ವರ್ಗೀಕರಿಸಿದ್ದರು.

31 ಸಾವಿರ ಕೋಟಿ ಮೂಲಸೌಕರ್ಯಗಳಿಗೆ ಖರ್ಚು ಮಾಡಬೇಕು ಎಂದು ವರದಿಯಲ್ಲಿ ತಿಳಿಸಿದ್ದರು.



ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ತಲಾ ಆದಾಯ ರಾಜ್ಯದ ಒಟ್ಟಾರೆ ತಲಾ ಆದಾಯಕ್ಕಿಂತ ಹೆಚ್ಚಿದೆ. ಬೆಂಗಳೂರಿನ ತಲಾ ಆದಾಯವು ಹೆಚ್ಚಿದ್ದು, ಇದರಿಂದ ರಾಜ್ಯದ ಒಟ್ಟಾರೆ ತಲಾ ಆದಾಯ ಹೆಚ್ಚಾಗಿರುತ್ತದೆ. ಆದರೆ‌ ಉಳಿದ ಜಿಲ್ಲೆಗಳ ಕೊಡುಗೆ ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ ಎಂದು ಪ್ರೊ.ಗೋವಿಂದರಾವ್ ವಿವರಿಸಿದರು.



ನೀರಾವರಿಗೆ ಶೇ.25 ಹಾಗೂ ಗ್ರಾಮೀಣಾಭಿವೃದ್ಧಿಗೆ ಶೇ.21 ರಷ್ಟು ಖರ್ಚಾಗುತ್ತಿದೆ. ಉಳಿದ ಕ್ಷೇತ್ರಗಳ ಅಭಿವೃದ್ಧಿ ಕಡೆಗೆ ನೀಡಬೇಕಿದೆ. ಕೃಷಿ ಆದಾಯ‌ ಈಗ ಶೇ.9 ರಷ್ಟಿದೆ. ಕೈಗಾರಿಕೆ, ಉತ್ಪಾದನೆ ಮತ್ತಿತರ ಕ್ಷೇತ್ರಗಳಿಂದ ಉತ್ತಮ ಆದಾಯ ಬರುತ್ತಿದೆ. ಶೇ.9 ರಷ್ಟು ಆದಾಯ ಪ್ರಮಾಣವಿರುವ ಕ್ಷೇತ್ರದಲ್ಲಿ ಶೇ.41 ರಷ್ಟು ಜನರು ಕೆಲಸ ಮಾಡುತ್ತಿದ್ದಾರೆ. ಈ ಅಸಮತೋಲನವನ್ನು ನಿವಾರಿಸಬೇಕಿದೆ ಎಂದು ಗೋವಿಂದರಾವ್ ಅಭಿಪ್ರಾಯಪಟ್ಟರು.



ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ಆರ್ಥಿಕ ಇಲಾಖೆಯ ಕಾರ್ಯದರ್ಶಿ ವಿಶಾಲ್ ಆರ್., ಸರಕಾರದ ವತಿಯಿಂದ‌ ಅನುದಾನ ಘೋಷಣೆ ಜತೆಗೆ ಖಾಸಗಿ ವಲಯಗಳಾದ ಕೈಗಾರಿಕೆ, ಆಹಾರ ಸಂಸ್ಕಾರಣೆ ಮತ್ತಿತರ ಕ್ಷೇತ್ರಗಳಿಗೆ ಯಾವ ರೀತಿಯ ಉತ್ತೇಜನ ನೀಡಬೇಕು ಎಂಬುದನ್ನು ಅರಿತುಕೊಂಡು ಆ ಅಂಶಗಳನ್ನು ವರದಿಯಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ಅತ್ಯಂತ ಹಿಂದುಳಿದ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು. ಸರಕಾರದ ಯೋಜನೆ ತ್ವರಿತಗತಿಯಲ್ಲಿ ಜಾರಿಗೆ ತರುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಡಾ.ವಿಶಾಲ್ ಹೇಳಿದರು.




ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿರುವುದಿಲ್ಲ; ಉದ್ಯೋಗಾಧಾರಿತ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ. ಸರಕಾರಿ ಶಾಲಾ-ಕಾಲೇಜುಗಳ ಗುಣಮಟ್ಟವನ್ನು ಖಾಸಗಿ ಮಾದರಿಯಲ್ಲಿ ಒದಗಿಸಬೇಕಿದೆ ಎಂದು ಪ್ರತಿಪಾದಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸುವ ಮತ್ತು ನೀರಾವರಿ ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ಶೆಟ್ಟೆಣ್ಣವರ ಹೇಳಿದರು.



ಸಮಿತಿಯ ಸದಸ್ಯರಾದ ಸೂರ್ಯನಾರಾಯಣ, ಆರೋಗ್ಯ, ಶಿಕ್ಷಣ, ತಂತ್ರಜ್ಞಾನ ಬಳಕೆ ಮತ್ತಿತರ ಕ್ಷೇತ್ರಗಳಲ್ಲಿ ಕೆಲವು ಜಿಲ್ಲೆಗಳು ಹಿಂದೆ ಇರುವುದಕ್ಕಿಂತಲೂ ಅಧೋಗತಿಗೆ ಇಳಿದಿವೆ. ಇಂತಹ ವಿಷಯಗಳ ಮೇಲೆ ಬೆಳಕು ಚೆಲ್ಲುವ ಅಗತ್ಯವಿದೆ ಎಂದರು.

ಕೇವಲ ಮೂಲಸೌಕರ್ಯ ಒದಗಿಸಿದರೆ ಸಾಲದು; ಸಮರ್ಪಕ ಅನುಷ್ಠಾನ ಮಾಡಬೇಕಿದೆ ಎಂದರು.



ಇನ್ನೋರ್ವ ಸದಸ್ಯರಾದ ಎಸ್.ಡಿ.ಬಾಗಲಕೋಟೆ ಅವರು, ಗುಣಾತಾತ್ಮಕತೆಗೆ ಸಮಿತಿಯು ಆದ್ಯತೆ ನೀಡಲಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಹಿಂದುಳಿದಿರುವಿಕೆ ಕುರಿತು ಸೂಕ್ಷ್ಮ ಅಧ್ಯಯನ ಅಗತ್ಯವಿದ್ದು, ನಗರ-ಪಟ್ಟಣಗಳ ಮೂಲಸೌಕರ್ಯಗಳನ್ನು ಒದಗಿಸುವುದರಿಂದ ಒಟ್ಟಾರೆ ಅಭಿವೃದ್ಧಿಗೆ ವೇಗ ದೊರಕಬಹುದು ಎಂದು ತಿಳಿಸಿದರು.

ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಸಲಹೆಗಳನ್ನು



ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ಖಾನಾಪುರ ಕ್ಷೇತ್ರದಲ್ಲಿ ಶೇ.50 ರಷ್ಟು ಅರಣ್ಯ ಪ್ರದೇಶವಿರುವುದರಿಂದ ಸಂಪರ್ಕ ವ್ಯವಸ್ಥೆ ಸರಿಯಾಗಿಲ್ಲ; ಕೆಲವು ಪಂಚಾಯಿತಿಗಳಲ್ಲಿ ಮೂವತ್ತಕ್ಕೂ ಅಧಿಕ ಗ್ರಾಮಗಳಿದ್ದು, ಸಣ್ಣ ಸಣ್ಞ ಗ್ರಾಮ ಪಂಚಾಯಿತಿ ರಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.



ಮಲೆನಾಡು ಅಭಿವೃದ್ಧಿಗೆ ಹೆಚ್ಚಿನ‌ ಅನುದಾನ ಒದಗಿಸಬೇಕು; ಕಿತ್ತೂರು ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಕೆಲವು ಕಡೆ ಇರುವ ಭಾಷಾ ಅಸಮಾನತೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಶಾಸಕ‌ ಹಲಗೇಕರ ಸಲಹೆ ನೀಡಿದರು.



ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕೈಗಾರಿಕಾ ವಲಯದಲ್ಲಿ ಫೌಂಡ್ರಿ ಕ್ಲಸ್ಟ್ರ್, ಏರೋಸ್ಪೇಸ್, ಪ್ರವಾಸೋದ್ಯಮ, ಜವಳಿ, ಅಪೇರಲ್ಸ್, ಅಗ್ರೋ ಹಾಗೂ ಸಕ್ಕರೆ ಉತ್ಪಾದನೆ ಕ್ಷೇತ್ರಗಳಲ್ಲಿ ಬೆಳಗಾವಿ ಜಿಲ್ಲೆಯು ಮುಂಚೂಣಿಯಲ್ಲಿದೆ.

ಸೋಲಾರ್ ಹಾಗೂ ಪವನ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುತ್ತಿದೆ. ಕೃಷಿ ಸೇರಿದಂತೆ ಈ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ರೋಷನ್ ಅಭಿಪ್ರಾಯಪಟ್ಟರು.



ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಉದ್ಯಮಗಳ ಸ್ಥಾಪನೆಯಾಗಬೇಕಾದರೆ ಕಾನೂನು ಸುವ್ಯವಸ್ಥೆ ಚೆನ್ನಾಗಿರಬೇಕಾಗುತ್ತದೆ. ರಾಜ್ಯದಲ್ಲಿ ಅದರಲ್ಲೂ ಅತ್ಯುತ್ತಮ ಹೂಡಿಕೆ ತಾಣವಾಗಿರುವ ಬೆಂಗಳೂರಿನಲ್ಲೂ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತದೆ ಎಂದು ಹೇಳಿದರು.

ಖಾಸಗಿ ಹೂಡಿಕೆದಾರರು ಬರಬೇಕಾದರೆ ರಸ್ತೆ, ನೀರು ಸೇರಿದಂತೆ ಎಲ್ಲ ಮೂಲಸೌಕರ್ಯಗಳ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಸರಕಾರದ‌ ಜತೆ ಖಾಸಗಿ ವಲಯವೂ ಕೈಜೋಡಿಸಬೇಕಿದೆ ಎಂದರು.



ಕಾನೂನು ಸುವ್ಯವಸ್ಥೆ ರಕ್ಷಣೆಗೆ ಅನುಕೂಲವಾಗುವಂತೆ ನಾಗರಿಕರ ಸಂಖ್ಯೆಯ ಅನುಪಾತದಲ್ಲಿರುವ ಅಸಮತೋಲನವನ್ನು ನಿವಾರಿಸಲು ಆದ್ಯತೆ ನೀಡಬೇಕಿದೆ ಎಂದು ಡಾ.ಗುಳೇದ ಹೇಳಿದರು.



ಪ್ರಾಸ್ತಾವಿಕವಾಗಿ ಮಾತನಾಡಿದ ಅಸಮತೋಲನ ನಿವಾರಣಾ ಸಮಿತಿಯ ನಿರ್ದೇಶಕರಾದ ಡಿ.ಚಂದ್ರಶೇಖರಯ್ಯ, ರಾಜ್ಯದಲ್ಲಿನ ಅಸಮತೋಲನ ನಿವಾರಣೆಗೆ 2002 ರಲ್ಲಿ ಡಾ.ಡಿ.ಎಂ.ನಂಜುಂಡಪ್ಪ ನೇತೃತ್ವದ ಸಮಿತಿಯು ಅಸಮತೋಲನ ನಿವಾರಣೆಗೆ ರಾಜ್ಯದಲ್ಲಿ ಒಟ್ಟಾರೆ 31 ಸಾವಿರ ಕೋಟಿ ವಿನಿಯೋಗಿಸಲು ಶಿಫಾರಸ್ಸು ಮಾಡಿತ್ತು. ಆ ಪ್ರಕಾರ ರಾಜ್ಯ ಸರಕಾರವು 2007-08 ರಲ್ಲಿ ಸರಕಾರವು ಸಮಿತಿಯ ಶಿಫಾರಸ್ಸುಗಳ ಅನುಷ್ಠಾನಕ್ಕೆ ಮುಂದಾಯಿತು. ಆದರೆ ನಂತರ ನಡೆದ ಅಧ್ಯಯನ ಪ್ರಕಾರ ಅಸಮತೋಲನ ನಿವಾರಣೆ ಸಮರ್ಪಕವಾಗಿಲ್ಲ ಎಂಬುದು ಕಂಡುಬಂದಿತು ಎಂದು ತಿಳಿಸಿದರು.

ನಂಜುಂಡಪ್ಪ ಸಮಿತಿ ಸೂಚ್ಯಂಕಗಳಲ್ಲಿ ಬದಲಾವಣೆ ಅಗತ್ಯ ಕಂಡುಬಂದಿರುವುದರಿಂದ ಹೊಸದಾಗಿ ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಚಂದ್ರಶೇಖರಯ್ಯ ತಿಳಿಸಿದರು.



ಸಮಿತಿಯ ಸದಸ್ಯರಾದ ಸೂರ್ಯನಾರಾಯಣರಾವ್ ಎಂ.ಎಚ್., ಡಾ.ಎಸ್.ಡಿ.ಬಾಗಲಕೋಟಿ, ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ್, ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಡಾ.ಆರ್.ವಿಶಾಲ್, ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸಭೆಯಲ್ಲಿ ಉಪಸ್ಥಿತರಿದ್ದರು.



ಬೆಳಗಾವಿಯ ಫೌಂಡ್ರಿ ಕ್ಲಸ್ಟರ್ ಇನ್ನಷ್ಟು ಉತ್ತೇಜನ ನೀಡಲು ಅನುಕೂಲವಾಗುವಂತೆ ರಕ್ಷಣಾ ವಲಯದ ಉತ್ಪಾದನಾ ಘಟಕ; ಸಾರ್ವಜನಿಕ ಉದ್ಯಮ ಮತ್ತು ತಾಂತ್ರಿಕ ಶಿಕ್ಷಣ ಕೇಂದ್ರ ಸ್ಥಾಪಿಸುವ ಅಗತ್ಯವಿದೆ ಎಂದು ಆನಂದ ದೇಸಾಯಿ ತಿಳಿಸಿದರು. ಹೋಟೆಲ್ ಉದ್ಯಮ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳಬೇಕಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಅಜಯ್ ಪೈ ಸಲಹೆ ನೀಡಿದರು.



ರವೀಂದ್ರ ಪ್ರೈ.ಲಿ. ಕಂಪೆನಿಯ ಬಸವರಾಜ ಪಾಟೀಲ ಅವರು, ಸೋಲಾರ್ ಮತ್ತು ಪವನ ವಿದ್ಯುತ್ ಶಕ್ತಿ ಉತ್ಪಾದನೆಗೆ ಲಭ್ಯವಿರುವ ಅವಕಾಶಗಳು ಮತ್ತು ಅಭಿವೃದ್ಧಿಗೆ ಇರುವ ಅವಕಾಶಗಳ ಮೇಲೆ‌ ಬೆಳಕು ಚೆಲ್ಲಿದರು.

ಸೋಲಾರ ವಿದ್ಯುತ್ ಉತ್ಪಾದನೆಗೆ ಸಾಕಷ್ಟು ಅವಕಾಶಗಳಿದ್ದು, ಇದಕ್ಕೆ‌ ಸರಕಾರ ಪ್ರೋತ್ಸಾಹ ನೀಡಬೇಕು ಎಂದರು.



ಜಿಲ್ಲಾ ಶಸ್ತ್ರಚಿಕಿತ್ಸೆ ವೈದ್ಯರಾದ ಡಾ. ವಿಠ್ಠಲ ಮಾತನಾಡಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲು ಸಿಬ್ಬಂದಿಗಳ ನೇಮಕ ಅಗತ್ಯವಿದೆ ಎಂದರು. ತುಕಾನಟ್ಟಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞರು ಮಾತನಾಡಿ ವಿವಿಧ ಬೆಳಗಳ ಇಳುವರಿ ಹೆಚ್ಚಿಸಲು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ಕೇವಲ ಒಂದು ಬೆಳೆ ಅವಲಂಬಿಸಿದೆ ವಿವಿಧ ಮಾದರಿಯ ಬೆಳೆ ಬೆಳೆದು ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂದು ಹೇಳಿದರು.



ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಮಾತನಾಡಿ ನದಿತೀರದ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ಪ್ರತಿ ವರ್ಷ 5% ಇಳುವರಿ ಹೆಚ್ಚಳವಾಗುತ್ತಿದೆ ಎಂದರು.



ಉತ್ತರ ಕರ್ನಾಟಕ ವೇದಿಕೆ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಮಾತನಾಡಿ ದಕ್ಷಿಣ ಕರ್ನಾಟಕದ ಸಮಗ್ರ ಅಭಿವೃಧ್ದಿಯಂತೆ ಆಡಳಿತಾತ್ಮಕ ಅಭಿವೃದ್ಧಿ ಉತ್ತರ ಕರ್ನಾಟಕದಲ್ಲಿ ಸಹ ಆಗಬೇಕು ಎಂಬುದು ಜನರ ಅಭಿಪ್ರಾಯವಾಗಿದೆ.



ಉತ್ತರ ಕರ್ನಾಟಕದ ಭಾಗದ ಜನರಿಗೆ ಸರಳವಾಗಿ ಆಡಳಿತ ಸೌಲಭ್ಯಗಳು ಸಿಗಬೇಕಿದೆ. ಆಡಳಿತಾತ್ಮಕ ಶಕ್ತಿ ಕೇಂದ್ರವಾಗಿ ಸುವರ್ಣ ವಿಧಾನಸೌಧ ಮಾರ್ಪಡಬೇಕು. ಸುವರ್ಣ ವಿಧಾನಸೌಧದಿಂದ ಆಡಳಿತಾತ್ಮಕ ಅಧಿಕಾರ ಮುಂದುವರೆಯಬೇಕಿದೆ ಎಂದರು.



ಜಿಲ್ಲೆಯ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಿದ್ದು, ಅಭಿವೃದ್ಧಿ ದುಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಹೊಸ ತಾಲೂಕುಗಳ ಆಗಬೇಕಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಜಲಾಶಯಗಳು, ಧಾರ್ಮಿಕ ಕ್ಷೇತ್ರಗಳು ಅಭಿವೃಧ್ದಿ ಹೊಂದಬೇಕು ಎಂದು ಅಶೋಕ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು.



ರೈತ ಮುಖಂಡರೊಬ್ಬರು ಮಾತನಾಡಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಗೆ ಎಫ್.ಆರ್.ಪಿ ನಿಗದಿ ಬೆಲೆಯಂತೆ ಬೆಂಬಲ ಬೆಲೆ ಸಿಗುತ್ತಿಲ್ಲ. ಅದರಂತೆ ಕಾರ್ಖಾನೆಗಳು ಪಾವತಿಸಬೇಕು ಎಂದು ತಿಳಿಸಿದರು.



ಸಭೆಯಲ್ಲಿ ಉದ್ದಿಮೆದಾರರು, ಕೈಗಾರಿಕೋದ್ಯಮಿಗಳು, ಕೃಷಿ ತಜ್ಞರು, ವಿವಿಧ ಸಂಘ-ಸಂಸ್ಥೆಯವರು ಹಾಗೂ ಅಧಿಕಾರಿಗಳು ಅಸಮತೋಲನ ನಿವಾರಣೆಗೆ ಸಂಬಂಧಿಸಿದಂತೆ ಸಲಹೆ/ಅಭಿಪ್ರಾಯಗಳನ್ನು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ