Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು: ಪ್ರೊ.ಎಂ.ಮುನಿರಾಜು



ಬಳ್ಳಾರಿ,ಮಾ.21



ಪತ್ರಿಕೋದ್ಯಮ ಎಂಬುದು ಜನರ ಜೀವನಾಡಿಯಂತಿದ್ದು, ಬದಲಾಗುತ್ತಿರುವ ಶಿಕ್ಷಣ ಕ್ರಮದಲ್ಲಿ ಕೌಶಲ್ಯ ಆಧಾರಿತ ತಾಂತ್ರಿಕ ಕಲಿಕೆಗೆ ಒತ್ತು ನೀಡಬೇಕು. ದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಹೇಳಿದರು.

ಶುಕ್ರವಾರದಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.

ಪತ್ರಿಕೋದ್ಯಮ ಶಿಕ್ಷಣ ಗಟ್ಟಿಗೊಳಿಸಲು ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಸುಸಜ್ಜಿತ ಸ್ಟುಡಿಯೋ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕುಲಸಚಿವರಾದ ರುದ್ರೇಶ್ ಎಸ್.ಎನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಬರೆಯಬೇಕು. ಬರೆಯುವುದರಿಂದ ಬರವಣಿಗೆಯಲ್ಲಿನ ಲೋಪದೋಷಗಳು ಮನವರಿಕೆಯಾಗುತ್ತವೆ. ಇದರಿಂದ ಬರವಣಿಗೆಯ ಕೌಶಲ್ಯ ವೃದ್ಧಿಸುತ್ತದೆ. ಇದರ ಜೊತೆಗೆ ಮಾತನಾಡುವ ಕೌಶಲ್ಯವನ್ನು ಸಹ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವರದಿಗಾರ ಹರಿಶಂಕರ್ ಜಿ.ಪಾಳ್ಯ ಅವರು ಮಾತನಾಡಿ, ತನಿಖಾ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಳ್ಳುವವರು ನಿರ್ಭೀತಿ ಮತ್ತು ಆಮೀಷಕ್ಕೆ ತುತ್ತಾಗದಂತೆ ಕೆಲಸ ಮಾಡುವುದು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಪತ್ರಿಕೋದ್ಯಮ ಎಂಬುದು ಹುಲಿಯ ಮೇಲಿನ ಸವಾರಿ ಇದ್ದಂತೆ. ಅಡ್ಡದಾರಿ ಹಿಡಿಯದೆ ನೈತಿಕ ಪತ್ರಿಕೋದ್ಯಮವನ್ನು ಅಂತರಾಳ ಮಾಡಿಕೊಂಡು ಕೆಲಸ ನಿರ್ವಹಿಸಿದಲ್ಲಿ ಯಾರ ಹಂಗಿಲ್ಲದೆ ಈ ಕ್ಷೇತ್ರದಲ್ಲಿ ಮುಂದುವರೆಯಬಹುದು ಎಂದು ತಿಳಿಸಿದರು.

ಬಳಿಕ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ರಾಕೇಶ್ ವಿ.ತಾಳಿಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಧನುಂಜಯ ಭಟ್ ಸ್ವಾಗತಿಸಿದರು. ಡಾ.ಜಯರಾಜ.ಹೆಚ್ ನಿರೂಪಿಸಿ ವಂದಿಸಿದರು. ಪತ್ರಿಕೋದ್ಯಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ