Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ





ಬಳ್ಳಾರಿ,ಆ.31

ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.

ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (ಖಚಿಣioಟಿಚಿಟisಚಿಣioಟಿ) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು ಆ.31 ರಿಂದ ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್ ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್ ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು.

ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇ.2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು