Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆ; ಅಗತ್ಯ ಮುನ್ನೆಚ್ಚರಕ್ಕೆ ಡಿಸಿ ಸೂಚನೆ

ಮಡಿಕೇರಿ ಜು.04-ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬಂಧ ಮಾಹಿತಿ ಪಡೆಯುವುದರ ಜೊತೆಗೆ, ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ತಹಶೀಲ್ದಾರರು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಹವಾಮಾನ ಮುನ್ಸೂಚನೆ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ಹಂಚಿಕೊಳ್ಳಬೇಕು. ತಮ್ಮ ಹಾಗೂ ತಾಪಂ.ಇಒ ಹಂತದಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಹಾಗೆಯೇ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ಸಭೆಗಳನ್ನು ಮಾಡಿ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಬೇಕು ಎಂದರು.

ಹೆಚ್ಚಿನ ಮಳೆಯಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆಗೆ ಸಂಬಂಧಿಸಿದಂತೆ ಡಿಡಿಪಿಐ ಅವರಿಗೆ ಮಾಹಿತಿ ನೀಡಬೇಕು. ಡಿಡಿಪಿಐ ಅವರು ರಜೆ ಘೋಷಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಕ್ರಮವಹಿಸಬೇಕು ಎಂದರು.

ಪ್ರಾಕೃತಿಕ ವಿಕೋಪ ಎದುರಿಸುವ ಸಂಬಂಧ ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ ಇತರರ ಜೊತೆಗೂಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ‘ಪ್ರಾತ್ಯಕ್ಷಿಕೆ’ ಏರ್ಪಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಎಚ್ಚರವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಅತೀವೃಷ್ಟಿ ಉಂಟಾಗದಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕು ಎಂದು ಮಾಹಿತಿ ಇರಬೇಕು. ಅಂತಹ ಸಮಯದಲ್ಲಿ ಹೆಚ್ಚಿನ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ಎಚ್ಚರವಹಿಸಬೇಕು. ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಸದಾ ಎಚ್ಚರವಹಿಸಬೇಕು. ಈ ಬಗ್ಗೆ ಜಲಾಶಯಗಳು, ನದಿಗಳಿಗೆ ಯಾರೂ ಸಹ ತೆರಳದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಅಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು. ಮಾಹಿತಿ ಫಲಕ ಅಳವಡಿಸಬೇಕು ಎಂದು ವೆಂಕಟ್ ರಾಜಾ ಅವರು ಹೇಳಿದರು.

ಕಳೆದ 2018 ರಿಂದ ಮೂರು ವರ್ಷದ ಅವಧಿಯಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಕರೆ ಮಾಡಿದಾಗ ಸ್ವೀಕರಿಸಬೇಕು. ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ ತಹಶೀಲ್ದಾರರು ಕಾಲ ಕಾಲಕ್ಕೆ ಮಾಹಿತಿ ನೀಡುವುದು ಸಹ ಅತೀ ಮುಖ್ಯವಾಗಿದೆ ಎಂದರು.

ರಸ್ತೆ ಬದಿಗೆ ಮರ ಹಾಗೂ ವಿದ್ಯುತ್ ಕಂಬ ಬಿದ್ದಲ್ಲಿ ಸಕಾಲದಲ್ಲಿ ತೆರವುಗೊಳಿಸುತ್ತಿದ್ದಾರೆ. ಹಾಗೆಯೇ ಬರೆ ಕುಸಿತ ಉಂಟಾದಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಸಾರಿಗೆ ಸಂಪರ್ಕ ಮತ್ತಿತರ ವ್ಯತ್ಯಯಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕಾರ್ಯವಾಗಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜುಲೈ ಅಂತ್ಯದೊಳಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕೆಡಿಪಿ ಸಭೆಗೆ ಸಿದ್ಧತೆ ಕೈಗೊಂಡಿರುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ